Advertisement
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದ ಉದ್ದೇಶ ಮತ್ತು ಕಾರ್ಯಸೂಚಿ ಹಾಗೂ ಅಂಗವಿಕಲರಿಗೆ ನೀಡಿದ ಸೌಲಭ್ಯ ಕುರಿತಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಸರ್ಕಾರದ ವಿವಿಧ ಇಲಾಖೆ ವ್ಯಾಪ್ತಿಯಲ್ಲಿ ಅಂಗವಿಕಲರ ಅನುಕೂಲಕ್ಕಾಗಿ ಲಭ್ಯವಿರುವ ಶೇ. 5ರ ಅನುದಾನ ಶೇ. ನೂರರಷ್ಟು ಬಳಕೆಯಾಗುವಂತೆ ನೋಡಿಕೊಳ್ಳುವ ಅವಶ್ಯಕತೆ ಇದೆ. ಆಯಾ ಇಲಾಖೆಗಳ ಅಧಿಕಾರಿಗಳು ಕ್ರಿಯಾಯೋಜನೆ ರೂಪಿಸಿ ಈ ಅನುದಾನ ಸಮರ್ಪಕವಾಗಿ ಬಳಸುವ ಜೊತೆಗೆ ಅಂಗವಿಕಲ ಪುನರ್ವಸತಿಗೆ ವಿಶೇಷ ಆದ್ಯತೆ ನೀಡುವಂತೆ ಸೂಚಿಸಿದರು.
Related Articles
Advertisement
ಅಂಗವಿಕಲ ಮಕ್ಕಳ ಅನುಕೂಲಕ್ಕಾಗಿ ಸಮನ್ವಯ ಶಿಕ್ಷಣ ದೊರಕಿಸಲಾಗುತ್ತಿದ್ದು, ಸರ್ಕಾರದ ಯಾವುದೇ ಸೌಲಭ್ಯದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಈಗಾಗಲೇ ಸರ್ಕಾರದ ನಿರ್ದೇಶನದಂತೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ಪರಿಣಾಮಕಾರಿ ಅನುಷ್ಠಾನಗೊಳಿಸುವ ಜವಾಬ್ದಾರಿ ಜಿಲ್ಲಾ ಸಮಿತಿ ಹೊಂದಿದ್ದು, ಸರ್ಕಾರದ ವಿವಿಧ ಇಲಾಖೆಗಳು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಯೋಜನೆಗಳ ಲಾಭವನ್ನು ಫಲಾನುಭವಿಗಳಿಗೆ ದೊರಕಿಸುವ ಜೊತೆಗೆ ಗುಣಮಟ್ಟದ ಸಾಧನಾ ಸಲಕರಣೆಗಳು ದೊರಕಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಭಾರ ಉಪನಿರ್ದೇಶಕ ಸಿ.ಬಿ. ಕುಂಬಾರ, ಡಿಡಿಆರ್‌ಸಿ ನೋಡಲ್ ಅಧಿಕಾರಿ ಡಾ| ಎಂ.ಸಿ. ಯಡವಣ್ಣವರ, ಅಂಗವಿಕಲ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಅಧಿಕಾರಿ ವಿ.ಜಿ. ಉಪಾಧ್ಯೆ, ಎಪಿಡಿ ಸಂಚಾಲಕ ಗುರುಶಾಂತ ಹಿರೇಮಠ, ಅಂಗವಿಕಲರ ಪ್ರತಿನಿಧಿ ಮಲ್ಲಿಕಾರ್ಜುನ ಉಮರಾಣಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಾ| ರಾಜೇಶ್ವರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.