Advertisement

ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಲು ಸೂಚನೆ

12:03 PM Jan 10, 2020 | Team Udayavani |

ವಿಜಯಪುರ: ಆಯುಷ್ಮಾನ್‌ ಭಾರತ-ಆರೋಗ್ಯ ಕರ್ನಾಟಕ ಯೋಜನೆ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಲು ಇನ್ನೂ ಚುರುಕಾಗಿ ಕಾರ್ಯ ನಿರ್ವಹಿಸುವಂತೆ ಬೆಂಗಳೂರು ಸುವರ್ಣ ಆರೊಗ್ಯ ಸುರಕ್ಷಾ ಟ್ರಸ್ಟ್‌ ಕಾರ್ಯ ನಿರ್ವಾಹಕ ನಿರ್ದೇಶಕ ಎನ್‌
.ಟಿ. ಅಬ್ರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಆಯುಷ್ಮಾನ್‌ ಭಾರತ-ಆರೋಗ್ಯ ಕರ್ನಾಟಕ ಯೋಜನೆ ಕುರಿತು ಜಿಲ್ಲಾ ಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಆಯುಷ್ಮಾನ್‌ ಭಾರತ-ಆರೋಗ್ಯ ಕರ್ನಾಟಕ ಯೋಜನೆ ಅಡಿ ನೋಂದಣಿಯಾಗಿರುವ ಅರ್ಹ ರೋಗಿಗಳಿಗೆ ಕಡ್ಡಾಯವಾಗಿ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಲು ತಿಳಿಸಿದ ಅವರು, ಕ್ಲೇಮಗಳಿಗಾಗಿ ತಕ್ಷಣ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ಗೆ ಸಲ್ಲಿಸಿದಲ್ಲಿ 10 ಗಂಟೆಯೊಳಗೆ ಚಿಕಿತ್ಸಾ ವೆಚ್ಚ ಭರಿಸುವುದಾಗಿ ತಿಳಿಸಿದರು.

ಆಯುಷ್ಮಾನ್‌ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ ನಿಗದಿತ ಗುರಿಗೆ ತಕ್ಕಂತೆ ಪ್ರಗತಿ ಸಾಧಿ ಸದೆ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಇನ್ನು ಮುಂದೆ ಪ್ರತಿ ದಿನ ಕನಿಷ್ಠ 30 ಅರ್ಹ ಫಲಾನುಭವಿಗಳಿಗೆ ಜಿಲ್ಲಾಸ್ಪತ್ರೆಗಳಲ್ಲಿ ಸೌಲ
ದೊರೆಯುವಂತೆ ನೋಡಿಕೊಳ್ಳಬೇಕು. ಅವಶ್ಯಕ ಸಂಪನ್ಮೂಲ ಏಜೆನ್ಸಿಗಳ ಮೂಲಕ ಸಿಬ್ಬಂದಿ ಕೊರತೆ ನೀಗಿಸಿಕೊಳ್ಳುವಂತೆ ತಿಳಿಸಿದ ಅವರು, ಕಾಲ ಕಾಲಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಪರಿಶೀಲನೆ ನಡೆಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯ ಜಿಲ್ಲಾ ಆಸ್ಪತ್ರೆ ಸೇರಿದಂತೆ ವಿವಿಧ ತಾಲೂಕಾಸ್ಪತ್ರೆಗಳ ವ್ಯಾಪ್ತಿಯಲ್ಲಿ ಈ ಯೋಜನೆಯಡಿ ಅರ್ಹ ಫಲಾನುಭವಿಗಳ ಚಿಕಿತ್ಸಾ ವೆಚ್ಚ ಭರಿಸುವ ಕುರಿತಂತೆ ವರದಿಗಳನ್ನು ತಕ್ಷಣ ಸಲ್ಲಿಸುವಂತೆ ತಿಳಿಸಿದ ಅವರು, ನಿರ್ಲಕ್ಷ್ಯ ತೋರುವ ತಾಲೂಕು ಆರೋಗ್ಯ ಅಧಿಕಾರಿಗಳ ಮೇಲೆ ಅಮಾನತುನಂತಹ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

Advertisement

ಜಿಲ್ಲಾಸ್ಪತ್ರೆಗೆ ಸರ್ಕಾರದಿಂದ ಎಲ್ಲ ಮೂಲಭೂತ ಸೌಲಭ್ಯ ಕಲ್ಪಿದರೂ ಕೂಡಾ ಈ ಯೋಜನೆಯಡಿ ನಿಗದಿತ ಗುರಿ ಸಾಧಿಸದ ಬಗ್ಗೆ ಪರಿಶೀಲಿಸಿದ ಅವರು, ಜಿಲ್ಲಾಸ್ಪತ್ರೆ ಸೇರಿದಂತೆ ತಾಲೂಕಾಸ್ಪತ್ರೆ ವ್ಯಾಪ್ತಿಯಲ್ಲಿ ಸೂಕ್ತ ಪ್ರಗತಿ ಸಾಧಿಸಬೇಕು. ಅದರಂತೆ ಶಸ್ತ್ರ ಚಿಕಿತ್ಸಾ ವಿಭಾಗ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸಲಕರಣೆ ಆಧಾರಿತ ನಿಗದಿತ ಪ್ರಗತಿ ಸಾ ಧಿಸುವಂತೆ ತಿಳಿಸಿ ಯಾವುದೆ ರೀತಿ ನಿರ್ಲಕ್ಷ್ಯ ಕಂಡು ಬಂದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ್  ಅವರು ಪ್ರತಿ ಗುರುವಾರ ಆಯುಷ್ಮಾನ್‌ ಭಾರತ-ಆರೋಗ್ಯ ಕರ್ನಾಟಕ ಯೋಜನೆ ಅಡಿ ಸಾಧಿಸಿದ ಪ್ರಗತಿ ಪರಿಶೀಲಿಸಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಮತ್ತು ವೈದ್ಯಾಧಿಕಾರಿಗಳು
ಗುರಿಗೆ ತಕ್ಕಂತೆ ಪ್ರಗತಿ ಸಾ ಧಿಸುವಂತೆ ಸೂಚನೆ ನೀಡಿದರು.ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಮಹೆಂದ್ರ ಕಾಪ್ಸೆ, ಜಿಲ್ಲಾ ಶಸ್ತ್ರ ಚಿಕಿತ್ಸಕ ಕಟ್ಟಿ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next