Advertisement
ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬರ ಕುರಿತು ನಿರ್ವಹಣಾ ಸಭೆ ಅಧ್ಯಕ್ಷತೆ ವಹಿಸಿದ್ದ ಅವರು, ಬರ ನಿರ್ವಹಣೆ ಹಾಗೂ ಕುಡಿಯುವ ನೀರು ಪೂರೈಕೆಗೆ ಯಾವುದೇ ಅನುದಾನದ ಕೊರತೆ ಇಲ್ಲ. ಬರದಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರದೇ ಬರಗಾಲ ಕಾಮಗಾರಿಗಳನ್ನು ಕೈಗೊಳ್ಳಬೇಕು. ನೀರಿನ ಅವಶ್ಯಕತೆ ಇರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು ಎಂದು ಹೇಳಿದರು.
Related Articles
Advertisement
ಜಿಲ್ಲೆಯಲ್ಲಿರುವ ಮೇವು ಬ್ಯಾಂಕ್‌ಗಳಿಂದ ಜಾನುವಾರುಗಳಿಗೆ ಟಾಂಗಾ ಮಾಲೀಕರ ಕುದುರೆಗಳಿಗೂ ಮೇವು ಒದಗಿಸಲು ಕ್ರಮ ಕೈಗೊಳ್ಳಬೇಕು. ಬರ ಪರಿಸ್ಥಿತಿ ಇರುವ ಹಿನ್ನಲೆಯಲ್ಲಿ ನರೇಗಾ ಯೋಜನೆಯಡಿ ಮಾನವ ದಿನಗಳನ್ನು ಸೃಷ್ಟಿಸಿ ಜನರಿಗೆ ಉದ್ಯೋಗ ನೀಡಿ ನೆರವಾಗಬೇಕು. ವೇತನ ಬಾಕಿ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಿಕೊಂಡು ಜನರ ನೆರವಿಗೆ ಧಾವಿಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಮಾತನಾಡಿ, ವಸತಿ ಶಾಲೆಗಳ ನಿವೇಶನ, ಸ್ಮಶಾನ ಭೂಮಿ ಕುರಿತು ನ್ಯಾಯಾಲಯಗಳ ವ್ಯಾಜ್ಯಗಳನ್ನು 20 ದಿನಗಳಲ್ಲಿ ಪೂರ್ಣಗೊಳಿಸಲು ಸೂಚಿಸಿದರು.
ಜಿಪಂ ಸಿಇಒ ವಿಕಾಸ್ ಸುರಳಕರ ಮಾತನಾಡಿ, ಬರಗಾಲದ ಸಂದರ್ಭದಲ್ಲಿ ಅಧಿಕಾರಿಗಳು ಪರಸ್ಪರ ಸಮನ್ವಯ ಹಾಗೂ ಜನರಿಗೆ ಅನುಕೂಲ ಆಗುವಂತೆ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ಅಧಿಕಾರಿಗಳ ಮಧ್ಯೆ ಸಮನ್ವಯತೆ ಕೊರತೆಯಿಂದ ಕಾರ್ಯ ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಅಧಿಕಾರಿಗಳು ಸಮನ್ವಯತೆ ಸಾಧಿಸಬೇಕು. ಜಿಪಿಎಸ್ ಡಾಟಾ ಇಲ್ಲದ ಕಡೆ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ವಸ್ತುಸ್ಥಿತಿ ಕುರಿತು ಪರಿಶೀಲನೆ ನಡೆಸಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶಧದಲ್ಲಿ ಭಾರಿ ಕುಸಿತವಾಸಗಿದೆ. ಹೀಗಾಗಿ ಫಲಿತಾಂಶ ಸುಧಾರಣೆಗೆ ಖಾಸಗಿ ಅನುದಾನಿತ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಮಾನದಂಡ, ನಿಯಮ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಭೆಯಲ್ಲಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆ, ವಿವಿಧ ನಿಗಮಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಅಪರ್ ಜಿಲ್ಲಾಧಿಕಾರಿ ಎಚ್.ಪ್ರಸನ್ನ, ಜಿಪಂ ಉಪ ಕಾರ್ಯದರ್ಶಿ ಅಮರೇಶ ನಾಯಕ ಸೇರಿದಂತೆ ಜಿಲ್ಲೆಯ ಉಪ ವಿಭಾಗಾಧಿಕಾರಿಗಳು, ಆಯಾ ತಾಲೂಕು ತಹಶೀಲ್ದಾರ್‌ರು ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಅಧಿಕಾರಿಗಳು ಇದ್ದರು.
ಬರಗಾಲದ ಸಂದರ್ಭದಲ್ಲಿ ಅಧಿಕಾರಿಗಳು ಪರಸ್ಪರ ಸಮನ್ವಯ ಹಾಗೂ ಜನರಿಗೆ ಅನುಕೂಲ ಆಗುವಂತೆ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ಅಧಿಕಾರಿಗಳ ಮಧ್ಯೆ ಸಮನ್ವಯತೆ ಕೊರತೆಯಿಂದ ಕಾರ್ಯ ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಅಧಿಕಾರಿಗಳು ಸಮನ್ವಯತೆ ಸಾಧಿಸಬೇಕು. ಜಿಪಿಎಸ್ ಡಾಟಾ ಇಲ್ಲದ ಕಡೆ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ವಸ್ತುಸ್ಥಿತಿ ಕುರಿತು ಪರಿಶೀಲನೆ ನಡೆಸಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ.•ವಿಕಾಸ್ ಸುರಳಕರ,ಜಿಪಂ ಸಿಇಒ