Advertisement

31ರ ವರೆಗೆ ಆಸ್ತಿ ತೆರಿಗೆ ಪಾವತಿ ರಿಯಾಯ್ತಿ ಕಾಲಾವಧಿ ವಿಸ್ತರಣೆ

05:52 PM May 31, 2020 | Naveen |

ವಿಜಯಪುರ: ಕೋವಿಡ್‌-19 ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್‌ಡೌನ್‌ ಜಾರಿಯಾಗಿರುವ ಕಾರಣ ನಗರದಲ್ಲಿ ಆರ್ಥಿಕ ವರ್ಷದ ಮೊದಲ ತಿಂಗಳ ಏಪ್ರೀಲ್‌ನಲ್ಲಿ ಮುಂಗಡ ತೆರಿಗೆ ಪಾವತಿಸುವ ಅವಧಿಯನ್ನು ಜು.31ರ ವರೆಗೆ ವಿಸ್ತರಿಸಲಾಗಿದೆ.

Advertisement

ಈ ಕುರಿತು ಪ್ರಕಟಣೆ ನೀಡಿರುವ ಮಹಾನಗರ ಪಾಲಿಕೆ ಆಯುಕ್ತ ಹರ್ಷ ಶಟ್ಟಿ, ಪಾಲಿಕೆ ವ್ಯಾಪ್ತಿಯ ತೆರಿಗೆದಾರರಿಗೆ ಆಸ್ತಿ ತೆರಿಗೆ ಪಾವತಿ ಮೇಲಿನ ಶೇ.5 ರಿಯಾಯ್ತಿ ಕಾಲಾವಧಿಯನ್ನು ಜುಲೈ 31ರ ವರೆಗೆ ವಿಸ್ತರಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ನಗರ ಅಭಿವೃದ್ಧಿಗೆ ಸಹಕರಿಸಬೇಕು. ಇದಲ್ಲದೇ ಕೋವಿಡ್‌ ಸೋಂಕಿನ ತಡೆಗಾಗಿ ಪಾಲಿಕೆಗೆ ತೆರಿಗೆ ಪಾವತಿಗೆ ಬರುವ ಸಂದರ್ಭದಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಸಕಾಲದಲ್ಲಿ ಆಸ್ತಿ ತೆರಿಗೆ ಪಾವತಿಸಬೇಕು ಎಂದು ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next