Advertisement

ದರೋಡೆ ಆರೋಪಿಗಳಿಗೆ ಸೋಂಕು- ಪೊಲೀಸರಿಗೆ ಕ್ವಾರಂಟೈನ್‌

04:47 PM Jun 21, 2020 | Naveen |

ವಿಜಯಪುರ: ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಬಂಧಿತ ಮೂವರಲ್ಲಿ ಇಬ್ಬರು ಆರೋಪಿಗಳಿಗೆ ಕೋವಿಡ್‌ ಸೋಂಕು ಇರುವುದು ದೃಢಪಟ್ಟಿದೆ. ಪರಿಣಾಮ ಆರೋಪಿಗಳ ಸಂಪರ್ಕದಲ್ಲಿದ್ದ ಇಬ್ಬರು ಎಸ್‌ಐ ಹಾಗೂ 14 ಜನ ಪೊಲೀಸರನ್ನು ಕ್ವಾರಂಟೈನ್ ಮಾಡಿ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಲಾಗಿದೆ.

Advertisement

ಹೈದ್ರಾಬಾದ್‌ ನಿವಾಸಿ ದಂಪತಿಗೆ ಅಗ್ಗದ ದರಕ್ಕೆ ಚಿನ್ನ ಮಾರಾಟ ಮಾಡುವ ವಂಚನೆ ಪ್ರಕರಣದಲ್ಲಿ ಪೊಲೀಸರು ಜೂ. 17ರಂದು ಮೂವರನ್ನು ಬಂಧಿಸಿದ್ದು ಎಲ್ಲರನ್ನೂ ಸಿಂದಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ನಡೆಸಿ ಕೋವಿಡ್‌ ಸೋಂಕು ಪತ್ತೆಗಾಗಿ ಗಂಟಲು ದ್ರವ ಸಂಗ್ರಹಿಸಲಾಗಿತ್ತು. ಬಳಿಕ ಆರೋಪಿಗಳನ್ನು ನ್ಯಾಯಾಲಯದ ಆದೇಶದಂತೆ ವಿಜಯಪುರ ಜಿಲ್ಲಾ ಕೇಂದ್ರ ಕಾರಾಗ್ರಹಕ್ಕೆ ಕಳಿಸಲಾಗಿತ್ತು. ಇದರಲ್ಲಿ ಇಬ್ಬರು ಆರೋಪಿಗಳಲ್ಲಿ ಕೋವಿಡ್‌ ಸೋಂಕು ಇರುವುದು ಜೂ. 19ರಂದು ಪ್ರಕಟಗೊಂಡಿರುವ ಕೋವಿಡ್‌ ವರದಿಯಲ್ಲಿ ದೃಢಪಟ್ಟಿದೆ. ಹೀಗಾಗಿ ಜೈಲಿನಲ್ಲಿ ಪ್ರತ್ಯೇಕ ಕೋಣೆಯಲ್ಲಿ ಇರಿಸಲಾಗಿದ್ದ ಬಂಧಿತ ಆರೋಪಿಗಳನ್ನು ಕೋವಿಡ್‌ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಈ ಮಧ್ಯೆ ಸದರಿ ಆರೋಪಿಗಳನ್ನು ಬಂಧಿಸುವುದು, ವಿಚಾರಣೆ ನಡೆಸುವುದು ಸೇರಿದಂತೆ ಸೋಂಕಿತ ಆರೋಪಿಗಳ ಸಂಪರ್ಕದಲ್ಲಿದ್ದ ಕಾರಣಕ್ಕೆ ಜಿಲ್ಲೆಯ ಇಬ್ಬರು ಪಿಎಸ್‌ಐ ಹಾಗೂ 14 ಸಿಬ್ಬಂದಿಗಳನ್ನು ಜಿಲ್ಲಾಡಳಿತ ಕ್ವಾರಂಟೈನ್‌ ಮಾಡಲಾಗಿದೆ. ಇದಲ್ಲದೇ 37 ಪೊಲೀಸರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳಿಸಲಾಗಿದೆ ಎಂದು ಎಸ್ಪಿ ಅನುಪಮ್‌ ಅಗರವಾಲ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next