Advertisement

ಕ್ವಾರಂಟೈನ್‌ ನಿಯಮ ಉಲ್ಲಂಘಿಸಿದರೆ ಕ್ರಮ

04:55 PM Jun 24, 2020 | Naveen |

ವಿಜಯಪುರ: ಕೋವಿಡ್‌-19 ಸಾಂಕ್ರಾಮಿಕ ರೋಗ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಕೆಲವು ಜನರನ್ನು ಹೋಮ್‌ ಕ್ವಾರಂಟೈನ್‌ ಮಾಡಲಾಗಿದೆ. ನಿಯಮ ಉಲ್ಲಂಘಿಸಿ ಕ್ವಾರಂಟೈನ್‌ ಅವಧಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಭಾಗಿಯಾದವರ ವಿರುದ್ಧ ಐ.ಪಿ.ಸಿ ಕಲಂ 188 ರನ್ವಯ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ವೈ.ಎಸ್‌ ಪಾಟೀಲ ಸೂಚಿಸಿದ್ದಾರೆ.

Advertisement

ಜಿಲ್ಲೆಯಲ್ಲಿ ಹೋಂ ಕ್ವಾರಂಟೈನ್‌ ಮಾಡಲಾದವರಲ್ಲಿ ಕೆಲವರು ಸರ್ಕಾರದ ನಿಯಮ ಉಲ್ಲಂಘಿಸಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಸಭೆ-ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಇದರಲ್ಲಿ 148 ಜನರ ಮೇಲೆ ಪರಿಶೀಲನೆ ನಡೆಸಲಾಗಿದ್ದು, ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನುರೀತ್ಯ ಕ್ರಮ ಜರುಗಿಸುವ ಬಗ್ಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next