ವಿಜಯಪುರ: ನಗರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಜಿಲ್ಲೆಯ ಯುವ ಸಾಹಿತಿ, ಉಪನ್ಯಾಸಕ ರಾಜೇಂದ್ರಕುಮಾರ ಬಿರಾದಾರ (47) ಮೃತಪಟ್ಟಿದ್ದಾರೆ.
ಬುಧವಾರ ಸಂಜೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಮಳೆ ಆರಂಭವಾಗಿದ್ದು, ನಗರದ ರಾಮನಗರದ ರಸ್ತೆ ಬಳಿಯ ನಿರ್ಮಾಣ ಹಂತದಲ್ಲಿದ್ದ ಕುಡಿಯುವ ನೀರು ಸರಬರಾಜು ಯೋಜನೆಯ ವಾಲ್ ಟ್ಯಾಂಕ್ ನಲ್ಲಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು.
ಕೂಡಲೇ ಅವರನ್ನು ಬಿ.ಎಲ್.ಡಿ.ಇ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
ಮರಣೋತ್ತರ ಪರೀಕ್ಷೆ ಬಳಿಕ ಗುರುವಾರ ಅವರ ಸ್ವಗ್ರಾಮ ವಿಜಯಪುರ ತಾಲೂಕಿನ ಉಕಮನಾಳ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.
Related Articles
ಮೃತ ರಾಜೇಂದ್ರ ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಬಿಟ್ಟು ಅಗಲಿದ್ದಾರೆ.