ವಿಜಯಪುರ: ಸ್ವಾತಂತ್ರ್ಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಫೋಟೋಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ಅಪಮಾನಿಸಿರುವ ಘಟನೆ ಜಿಲ್ಲೆಯ ಹಗರಗುಂಡ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.
ತಾಳಿಕೋಟಿ ತಾಲೂಕಿನ ಹಗರಗುಂಡ ಗ್ರಾಮದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ರಾಯಣ್ಣ ಭಾವಚಿತ್ರಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿದ್ದಾರೆ.
ಸೋಮವಾರ ತಡರಾತ್ರಿ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಮಂಗಳವಾರ ಬೆಳಿಗ್ಗೆ ಕೃತ್ಯ ಬೆಳಕಿಗೆ ಬಂದಿದೆ.
ಘಟನೆ ಬೆಳಕಿಗೆ ಬರುತ್ತಲೇ ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಸ್ಥಳೀಯ ಯುವಕರು ಚಪ್ಪಲಿ ಹಾರ ತೆರವುಗೊಳಿಸಿದ್ದಾರೆ
ತಾಳಿಕೋಟಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸ್ಥಾನಿಕ ವಿಚಾರಣೆ ಆರಂಭಿಸಿದ್ದಾರೆ.
ಇದನ್ನೂ ಓದಿ: Kampli: ತಾಲ್ಲೂಕಿನಲ್ಲಿ ದಾಖಲೆಯ ಮಳೆ… ಜಮೀನುಗಳು ಜಲಾವೃತ, ಹಲವೆಡೆ ರಸ್ತೆ ಸಂಪರ್ಕ ಕಡಿತ