Advertisement

Vijayapura: ಅಪರಿಚಿತರಿಂದ ಗುಂಡಿನ ದಾಳಿ, ಸ್ಥಳದಲ್ಲೇ ಮೃತಪಟ್ಟ ರೌಡಿಶೀಟರ್

02:09 PM Jun 16, 2024 | Kavyashree |

ವಿಜಯಪುರ: ಜಿಲ್ಲೆಯಲ್ಲಿ ಮತ್ತೆ ಗುಂಡಿನ‌ ಸದ್ದು ಕೇಳಿ ಬಂದಿದ್ದು, ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ ರೌಡಿಶೀಟರ್ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

Advertisement

ಚಡಚಣ ತಾಲೂಕಿನ ನೀವರಗಿ ಗ್ರಾಮದಲ್ಲಿ ನಡೆದಿರುವ ಗುಂಡಿನ ದಾಳಿಯಲ್ಲಿ ಪೆರೋಲ್ ಮೇಲೆ ಇತ್ತೀಚಿಗಷ್ಟೇ ಜೈಲಿನಿಂದ ಹೊರಬಂದಿದ್ದ ಅಶೋಕ ಮಲ್ಲಪ್ಪ ಗಂಟಗಲ್ಲಿ ಮೃತಪಟ್ಟವರು.

ಅಶೋಕ ಭಾನುವಾರ ಚಡಚಣ ಪಟ್ಟಣಕ್ಕೆ ಹೊರಡಲು ಸಿದ್ಧವಾಗಿ ಮನೆ ಬಳಿ ನಿಂತಿದ್ದಾಗ ಅಪರಿಚಿತರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ ಮೂರಕ್ಕೂ ಹೆಚ್ಚು ಗುಂಡುಗಳು ಬೆನ್ನು ಸೀಳಿದ್ದು, ಅಶೋಕ ವಿಪರೀತ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೊಲೆ ಹಾಗೂ ಇತರೆ ಪ್ರಕರಣಗಳಲ್ಲಿ ಶಿಕ್ಷೆಯಾಗಿ ಜೈಲು ಸೇರಿದ್ದ ಅಶೋಕ ಕೆಲ ದಿನಗಳ ಹಿಂದಷ್ಟೇ ಪೆರೋಲ್ ಮೇಲೆ ಹೊರಬಂದಿದ್ದ. ಹತ್ಯೆಯಾಗಿರುವ ಅಶೋಕನ ಪತ್ನಿ ಚಡಚಣ ಪಟ್ಟಣ ಪಂಚಾಯತ್ ಬಿಜೆಪಿ ಸದಸ್ಯೆಯಾಗಿದ್ದಾಳೆ.

ಸುದ್ದಿ ತಿಳಿಯುತ್ತಲೇ ಚಡಚಣ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next