Advertisement
ಮಾಜಿ ಸಿಎಂ ಯಡಿಯೂರಪ್ಪ ಮೇಲೆ ಭ್ರಷ್ಟಾಚಾರ ಆರೋಪದ ತನಿಖೆ ಮಾಡಲು ಸಚಿವ ಸಂಪುಟದಲ್ಲಿ ಒಪ್ಪಿಗೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಹಗರಣ ಗಂಭೀರತೆ ಪಡೆದುಕೊಂಡಿದೆ. ಇಡಿಯವರು ತನಿಖೆ ಮಾಡುತ್ತಿದ್ದಾರೆ. ವಾಲ್ಮೀಕಿ ನಿಗಮದ ಹಗರಣವನ್ನು ಹೈಕೋರ್ಟ್ ನಿಗಾದಲ್ಲಿ ಸಿಬಿಐ ತನಿಖೆಗೆ ನೀಡಬೇಕೆಂದು ಒತ್ತಾಯಿಸಿದ್ದೇವೆ. ಇಷ್ಟು ದಿನ ಅವರಿವರು ಹೊಂದಾಣಿಕೆಯಲ್ಲಿದ್ದರು. ನಮ್ಮದನ್ನು ನೀವು ಮುಚ್ಚಿಡುವುದು, ನಿಮ್ಮದನ್ನು ನಾವು ಮುಚ್ಚಿಡುವುದು ಎಂಬ ಒಪ್ಪಂದವಿತ್ತು, ಆ ಕರಾರು ಮುರಿದು ಹೋಗಿದೆ. ಹಾಗಾಗಿ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ, ರಾಜಕೀಯ ನಿವೃತ್ತಿಯಾಗಿರುವ ಯಡಿಯೂರಪ್ಪರ ಮೇಲೆ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಎಂದರು.
Related Articles
Advertisement
ಶಿವಮೊಗ್ಗ, ಶಿಕಾರಿಪುರದಲ್ಲಿ ರಕ್ತದಲ್ಲಿ ಪತ್ರ ಬರೆದಿದ್ದರೆ ಒಂದು ಔಚಿತ್ಯವಿತ್ತು. ಯಾವ ಬಿಜೆಪಿಯ ಜನಪ್ರತಿನಿಧಿಯೂ ಇಲ್ಲದ ಮಂಡ್ಯದಲ್ಲಿ ಕೇವಲ ಆರು ಜನರು ಕೈಗೆ ಚುಚ್ಚಿಕೊಂಡು ರಕ್ತದಲ್ಲಿ ಪತ್ರ ಬರೆಯುತ್ತಿದ್ದಾರೆ. ದುಡ್ಡು ಪಡೆದುಕೊಂಡು ಹೀಗೆ ಮಾಡುತ್ತಿದ್ದಾರೆ, ಯಾರು ಏನು ಬೇಕಾದರೂ ಮಾಡಲಿ ನಾನು ತಲೆಕೆಡಿಸಿಕೊಳ್ಳಲ್ಲ. ಶಿಫಾರಸ್ಸು ಮಾಡಲಿ ಕೋರ್ ಕಮಿಟಿಯಲ್ಲಿ ಏನೇ ತೀರ್ಮಾನ ತೆಗೆದುಕೊಳ್ಳಲಿ, ನಾವು ವಕ್ಪ್ ಹೋರಾಟವನ್ನು ಕೈ ಬಿಡಲ್ಲ. ಪ್ರಧಾನಿ ಅವರು ಹೇಳಿದಂತೆ ವಂಶವಾದ ಭ್ರಷ್ಟಾಚಾರ ರಾಜಕಾರಣದ ವಿರುದ್ಧ ಹೋರಾಡುವೆ, ಅದು ನಮ್ಮ ಪಕ್ಷವೇ ಇರಲಿ, ಬೇರೆ ಪಕ್ಷವೇ ಇರಲಿ ಎಂದರು.
ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆಶಿ ಜೊತೆ ಹೊಂದಾಣಿಕೆ ಇಲ್ಲ. ನಾನು ಹೊಂದಾಣಿಕೆ ಮಾಡಿಕೊಂಡಿದ್ದರೆ ನನ್ನ ಸಕ್ಕರೆ ಕಾರ್ಖಾನೆಗೆ ಯಾವುದೇ ತೊಂದರೆ ಆಗುತ್ತಿರಲಿಲ್ಲ. ಸಿಎಂ ಹಾಗೂ ಡಿಸಿಎಂ 42 ಕೇಸುಗಳನ್ನು ಹಾಕುತ್ತಿರಲಿಲ್ಲ. ವಿಜಯೇಂದ್ರನ ಮೇಲೆ ಒಂದೇ ಒಂದು ಕೇಸ್ ಹಾಕಿಲ್ಲ. ಯಡಿಯೂರಪ್ಪ ವಿರುದ್ಧ ಎಷ್ಟೇ ಗಂಭೀರ ಪ್ರಕರಣಗಳಿದ್ದರೂ ಮುಚ್ಚಿಟ್ಟಿದ್ದರು. ಈಗ ಬಿಎಸ್ ವೈ ಪ್ರಕರಣಗಳನ್ನು ತೆಗೆಯುತ್ತಿದ್ದಾರೆ. ಅವರವರದ್ದು ಹಳಸಿದೆ, ಹಳಸಿದ್ದಕ್ಕೆ ಹಸಿದಿದ್ದಕ್ಕೆ ಒಂದಾಗಿವೆ ಎಂದು ಯತ್ನಾಳ್ ಆರೋಪಿಸಿದರು.