ವಿಜಯಪುರ: ಲಾಕ್ ಡೌನ್ ಸಡಿಲಿಕೆ ಮಾಡಿದ ದಿನವೇ ಬೈಕ್ ಸವಾರ ಯುವಕನೋರ್ವ ಕರ್ತವ್ಯದ ಮೇಲಿದ್ದ ಎಎಸ್ಪಿ ಡಾ. ರಾಮ ಅರಸಿದ್ಧಿಗೆ ಢಿಕ್ಕಿ ಹೊಡೆದ ಕಾರಣ ಎಸ್ ಪಿ ತೀವ್ರ ಗಾಯಗೊಂಡಿದ್ದಾರೆ.
ವಿಜಯಪುರ ನಗರದಲ್ಲಿ ಲಾಕ್ ಡೌನ್ ಸಡಿಲಿಕೆಯ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮವಾಗಿ ಎಎಸ್ಪಿ ರಾಮ ಅರಸಿದ್ದಿ ಕಾಮತ್ ಹೊಟೇಲ್ ಬಳಿ ಸಂಚಾರ ನಿರ್ವಹಣೆ ಕರ್ತವ್ಯದಲ್ಲಿದ್ದರು.
ಈ ವೇಳೆ ವಾಹನ ತಪಾಸಣೆ ಮಾಡುತ್ತಿದ್ದ ಎಎಸ್ಪಿ ಅವರಿಗೆ ವೇಗವಾಗಿ ಬಂದ ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ. ಘಟನೆಯಲ್ಲಿ ಎಎಸ್ಪಿ ಅರಸಿದ್ಧಿ ಅವರಿಗೆ ಮುಖ ಹಾಗೂ ತಲೆಗೆ ತೀರ್ವ ಗಾಯಗಳಾಗಿವೆ. ಕೂಡಲೇ ಗಾಯಾಳು ಪೊಲೀಸ್ ಅಧಿಕಾರಿಯನ್ನು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಿಷಯ ತಿಳಿಯುತ್ತಲೇ ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ, ಎಸ್ಪಿ ಅನುಪಮ ಅಗರವಾರ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ.
ಘಟನೆ ಬಳಿಕ ಪೊಲೀಸರು ಆರೋಪಿ ಯುವಕನನ್ನು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಾಗಿದೆ. ಗೋಲಗುಂಬಜ ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.