Advertisement

Davanagere: ರಾಜ್ಯಸರ್ಕಾರ ಪಂಚಮಸಾಲಿ ಮೀಸಲಾತಿ ಹೋರಾಟವನ್ನ ನಿರ್ಲಕ್ಷಿಸಿದೆ: ಕೂಡಲಸಂಗಮ ಶ್ರೀ

03:18 PM Sep 13, 2024 | Team Udayavani |

ದಾವಣಗೆರೆ: ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಿಕ್ಕಷ್ಟು ಸ್ಪಂದನೆಯೂ ಈಗಿನ ಕಾಂಗ್ರೆಸ್ ಸರ್ಕಾರದಿಂದ ಸಿಕ್ಕಿಲ್ಲ. ಈಗಿನ ಕಾಂಗ್ರೆಸ್ ಸರ್ಕಾರ ಹೋರಾಟವನ್ನು ಸಂಪೂರ್ಣ ನಿರ್ಲಕ್ಷಿಸಿದೆ. ಮುಖ್ಯಮಂತ್ರಿಯವರು ನಿರಾಸಕ್ತಿ ತೋರಿದ್ದಾರೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿ (Basava Jaya Mruthyunjaya Swamiji) ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ ನಾವು ಮಾಡಿದ ಹೋರಾಟದ ಫಲವಾಗಿಯೇ ಈಗ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವಲ್ಲಿ ಪಂಚಮಸಾಲಿಗಳ ಕೊಡುಗೆಯನ್ನು ಮುಖ್ಯಮಂತ್ರಿಯವರು ಮರೆಯುವಂತಿಲ್ಲ. ಕಾನೂನು ಹೋರಾಟಕ್ಕೂ ಮೊದಲು ಸರ್ಕಾರ ಎಚ್ಚೆತ್ತುಕೊಂಡು ಪಂಚಮಸಾಲಿಗಳ ಮೀಸಲಾತಿಗೆ ಕ್ರಮವಹಿಸಲಿ ಎಂದು ಎಚ್ಚರಿಸಿದರು.

ಬೆಳಗಾವಿಯಲ್ಲಿ ಸಮಾವೇಶ

ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಬೇಡಿಕೆ ಬಗ್ಗೆ ಕಾನೂನಿನ ಮೂಲಕ ಸರ್ಕಾರಕ್ಕೆ ಒತ್ತಡ ಹಾಕಲು ಸೆ. 22ರಂದು ಬೆಳಗಾವಿಯಲ್ಲಿ ಪಂಚಮಸಾಲಿ ವಕೀಲರ ಪ್ರಥಮ ರಾಜ್ಯ ಮಟ್ಟದ ಸಮಾವೇಶವನ್ನು ಆಯೋಜಿಸಲಾಗಿದೆ ಎಂದರು.

Advertisement

ಮೀಸಲಾತಿಯನ್ನು ಕಾನೂನಾತ್ಮಕವಾಗಿ ಹೇಗೆ ಪಡೆದುಕೊಳ್ಳಬಹುದು ಎಂಬ ಬಗ್ಗೆ ಪಂಚಮಸಾಲಿ ಸಮಾಜದ ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ, ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next