Advertisement

ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆ

12:38 PM May 07, 2019 | Naveen |

ವಿಜಯಪುರ: ನಗರದ ಜ್ಞಾನಯೋಗಾಶ್ರಮದಲ್ಲಿ ನಡೆದ ಜಿಲ್ಲಾಮಟ್ಟದ ಯೋಗಾ ಸ್ಪರ್ಧೆಯಲ್ಲಿ ವರ್ಷದ ಗಂಡು ಮಕ್ಕಳ ಯೋಗಾಸನ ಸ್ಪರ್ಧೆಯಲ್ಲಿ ಜಿಲ್ಲೆಯ ಇಬ್ಬರು ಸ್ಪರ್ಧೆಯಲ್ಲಿ ಮೊದಲ ಎರಡು ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Advertisement

ವಿಜಯಪುರ ಜಿಲ್ಲಾ ಯೋಗ ಅಸೋಸಿಯೇಷನ್‌ ಹಾಗೂ ಜ್ಞಾನಯೋಗ ಆಶ್ರಮದ ಸಹಯೋಗದಲ್ಲಿ ವಿಜಯಪುರ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆ ಆಯೋಜಿಸಿತ್ತು. ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ರಾಘವೇಂದ್ರ ದತ್ತಾತ್ರೇಯ ಹಿಪ್ಪರಗಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ರಾಘವೇಂದ್ರ ಕೇಂದ್ರಿಯ ವಿದ್ಯಾಲಯ ವಿಜಯಪುರದ 6ನೇ ತರಗತಿಯಲ್ಲಿ ಓದುತ್ತಿದ್ದಾನೆ. ಇದೇ ಕೇಂದ್ರಿಯ ವಿದ್ಯಾಲಯ 9ನೇ ತರಗತಿಯಲ್ಲಿ ಓದುತ್ತಿರುವ ಶ್ರೀಗಿರಿ ದತ್ತಾತ್ತೇಯ ಹಿಪ್ಪರಗಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಈ ಇಬ್ಬರು ಯೋಗಪಟುಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು ಜೂನ್‌ 7ರಂದು ಉತ್ತರಕನ್ನಡ ಜಿಲ್ಲೆಯ ಶಿರಸಿ ಪಟ್ಟಣದಲ್ಲಿ ನಡೆಯುವ ರಾಜ್ಯಮಟ್ಟ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಅರ್ಹತೆ ಪಡೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next