Advertisement

ಉತ್ತಮ ಬದುಕಿಗಾಗಿ ಸ್ವಚ್ಛತೆಗೆ ಆದ್ಯತೆ ನೀಡಿ

11:03 AM Jul 19, 2019 | Naveen |

ವಿಜಯಪುರ: ಇಂದಿನ ಯುವ ಸಮುದಾಯವು ಸ್ವಚ್ಛತೆಗೆ ವಿಶೇಷ ಗಮನ ನೀಡುವ ಮೂಲಕ ಪರಿಶುದ್ಧ ಬದುಕು ರೂಪಿಸಿಕೊಳ್ಳಲು ಮುಂದಾಗುವಂತೆ ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಕರೆ ನೀಡಿದರು.

Advertisement

ಜಿಲ್ಲಾಡಳಿತ, ಜಿಪಂ ಸಹಯೋಗದಲ್ಲಿ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಸ್ವಚ್ಛ ಭಾರತ ಮಿಷನ್‌ ಯೋಜನೆಯಡಿ ಸ್ವಚ್ಛ ಮೇವ ಜಯತೆ ಆಂದೋಲನದ ಅಂಗವಾಗಿ ಸ್ವಚ್ಛತೆ, ಜಲಸಂರಕ್ಷಣೆ, ಪರಿಸರ ಸಂರಕ್ಷಣೆ ಕುರಿತ ಶಾಲಾ-ಕಾಲೇಜ್‌ ಮಕ್ಕಳಿಗೆ ಏರ್ಪಡಿಸಿದ್ದ ಜಿಲ್ಲಾಮಟ್ಟದ ಸ್ವಚ್ಛತಾ ರಸಪ್ರಶ್ನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸತ್ಯಮೇವ ಜಯತೆ ಘೋಷವಾಕ್ಯದಂತೆ ಸ್ವಚ್ಛ ಮೇವ ಜಯತೇಯ ಪರಿಕಲ್ಪನೆಯೊಂದಿಗೆ ಸ್ವಚ್ಛತೆಗೆ ವಿಶೇಷ ಗಮನ ನೀಡುವಂತೆ ಯುವ ಜನಾಂಗಕ್ಕೆ ಕರೆ ನೀಡಿದ ಅವರು, ದೇಶ ಕಟ್ಟುವಲ್ಲಿ ಯುವ ಜನಾಂಗದ ಪಾತ್ರ ಮುಖ್ಯವಾಗಿದೆ. ವಿದ್ಯಾರ್ಥಿ ಜೀವನದ ಹಂತದ ಮನಸ್ಸುಗಳು ಸ್ವಚ್ಛವಾಗಿದ್ದರೆ ಅವರ ಬಾಹ್ಯ ಚಿಂತನೆಗಳು ಕಾರ್ಯಾತ್ಮಕ ಚಟುವಟಿಕೆಗಳು ಸ್ವಚ್ಛವಾಗಿರುತ್ತವೆ ಎಂದು ಹೇಳಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಸ್ವಚ್ಛ ಭಾರತ ಮಿಷನ್‌ ಯೋಜನೆಯಡಿ ಹಮ್ಮಿಕೊಂಡಿರುವ ಮೂಲ ಉದ್ದೇಶ ಮಕ್ಕಳಲ್ಲಿ ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛತೆ ಬಗ್ಗೆ ಹೆಚ್ಚಿನ ಅರಿವು ಮೂಡಿಸುವುದಾಗಿದೆ. ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ತಮ್ಮ ದೈನಂದಿನ ಚಟುವಟಿಕೆಯಲ್ಲಿ ಪರಿಶುದ್ಧತೆ ಕಾಪಾಡಿಕೊಂಡು ಹೋಗುವ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಆದ್ದರಿಂದ ಇಂತಹ ಉತ್ತಮ ಕಾರ್ಯಕ್ರಮಗಳಲ್ಲಿ ಸ್ವಯಂ ಪ್ರೇರಣೆಯಿಂದ ಭಾಗವಹಿಸಿ ಅದರ ಉದ್ದೇಶ ತಿಳಿದು ಸದೃಢ ಸ್ವಚ್ಛ ದೇಶ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಹೇಳಿದರು.

ಜಿಪಂ ಉಪ ಕಾರ್ಯದರ್ಶಿ ಅಮರೇಶ ನಾಯಕ, ಪದವಿ ಪೂರ್ವ ಹಾಗೂ ವೃತ್ತಿ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪೂಜಾರಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಸ್‌.ರಾಠೊಡ, ಬೆಂಗಳೂರಿನಿಂದ ಆಗಮಿಸಿದ ಪ್ರೊಗ್ರಾಮರ್‌ ಅನಗಾ ಶ್ರೀಧರ, ಜಿಲ್ಲಾ ನೆರವು ಘಟಕದ ಅಧಿಕಾರಿ ಆಲಗೂರ ಸೇರಿದಂತೆ ಇತರರು ಉಪಸ್ಥಿತರಿದ್ದರು. ಸಿದ್ದಣ್ಣ ನಿರೂಪಿಸಿದರು. ಎಸ್‌.ಆರ್‌.ಕಟ್ಟಿ ವಂದಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next