Advertisement
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಜರುಗಿದ ಜಿಲ್ಲಾ ಮರಳು ನಿರ್ವಹಣಾ ಹಾಗೂ ಜಿಲ್ಲಾಮಟ್ಟದ ಟಾಸ್ಕ್ಪೋರ್ಸ್ ಸಮಿತಿ ಸಭೆಯಲ್ಲಿ ಅವರು ಈ ಮಾಹಿತಿ ನೀಡಿದರು.
Related Articles
Advertisement
ಜಿಲ್ಲೆಯಲ್ಲಿ 72 ಕಲ್ಲು ಗಣಿಗಾರಿಕೆ ಘಟಕಗಳು ಕಾರ್ಯ ನಿರ್ವಹಿಸುತ್ತಿದ್ದು, ಅಧಿಕೃತವಾಗಿ ಎಲ್ಲ ಗಣಿಗಾರಿಕೆಗಳು ನಿಯಮಾವಳಿಯಂತೆ ನಡೆಯುತ್ತಿರುವ ಕುರಿತು ಪರಿಶೀಲನೆಗೆ ತಂಡ ರಚಿಸಬೇಕಿದೆ. ಕಂದಾಯ, ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಭೂ ವಿಜ್ಞಾನ ಮತ್ತು ಗಣಿ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ತಂಡಗಳನ್ನು ರಚಿಸಿಕೊಂಡು ನಿರಂತರ ಪರಿಶೀಲನೆ ನಡೆಸಬೇಕು. ತಪ್ಪಿತಸ್ಥರು ಕಂಡು ಬಂದಲ್ಲಿ ನೋಟಿಸ್ ಜಾರಿಗೊಳಿಸುವ ಜೊತೆಗೆ ಪ್ರಕರಣ ಸಹ ದಾಖಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಸರ್ಕಾರದ ವಿವಿಧ ಯೋಜನೆಗಳಿಗೆ ಸಂಬಂಧಪಟ್ಟಂತೆ ಅವಶ್ಯಕವಿರುವ ಮರಳನ್ನು ಸ್ಟಾಕ್ ಯಾರ್ಡ್‌ಗಳಲ್ಲಿ ಸಂಗ್ರಹಿಸಿ ಅವಶ್ಯಕತೆಗನುಗುಣವಾಗಿ ಕಲ್ಪಿಸಬೇಕು. ಅದರಂತೆ ಎಂ ಸ್ಯಾಂಡ್ ಬಳಸುವ ಕುರಿತು ಕಲ್ಲು ಗಣಿಗಾರಿಕೆ ಘಟಕಗಳು ಹಾಗೂ ಗುತ್ತಿಗೆದಾರರೊಂದಿಗೆ ಮುಂದಿನ ದಿನಗಳಲ್ಲಿ ಪ್ರತ್ಯೇಕ ಸಭೆ ನಡೆಸಿ, ಅರ್ಹತೆಗೆ ಅನುಗುಣವಾಗಿ ಕಲ್ಲುಗಣಿಗಾರಿಕೆಗೆ ಅವಕಾಶ ಒದಗಿಸಬೇಕು ಎಂದರು.
ಜಿಲ್ಲೆಯ ಇಂಡಿಯಲ್ಲಿ ಮರಳು ಸ್ಟಾಕ್ ಯಾರ್ಡ್ ಸ್ಥಾಪಿಸಬೇಕು. ಉಪ ವಿಭಾಗಾಧಿಕಾರಿಗಳ ನೇತೃತ್ವದಲ್ಲಿ ಶಾಶ್ವತವಾಗಿ ತಂಡವೊಂದನ್ನು ರಚಿಸಬೇಕು. ಅವಶ್ಯಕ ಭೂಗರ್ಭ ಶಾಸ್ತ್ರಜ್ಞರು, ಇಬ್ಬರೂ ಹೋಂಗಾರ್ಡ್, ಪೊಲೀಸ್ ಸಿಬ್ಬಂದಿಗಳ ನೆರವು ಹಾಗೂ ಅವಶ್ಯಕ ವಾಹನಗಳನ್ನು ಸಹ ಪೂರೈಸಲು ಕ್ರಮ ಕೈಗೊಳ್ಳಲಾಗುವುದು. ಅನಧಿಕೃತವಾಗಿ ಮರಳು ಸಾಗಾಣಿಕೆಯಾಗದಂತೆ ನಿಗಾ ವಹಿಸುವಂತೆ ತಿಳಿಸಿದ ಅವರು, ಸರ್ಕಾರಿ ಯೋಜನೆಗಳಿಗೆ, ಲೈಸನ್ಸ್ ಹೊಂದಿದವರಿಗೆ ಮರಳು ಪೂರೈಸಬೇಕು ಎಂದು ಹೇಳಿದರು.
ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಕಾರಿಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನಿರ್ದೇಶಕರು, ವಿವಿಧ ಇಲಾಖೆಗಳೊಂದಿಗೆ ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಅಕ್ರಮ ಮರಳು ಗಣಿಗಾರಿಕೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿಪಂ ಸಿಇಒ ವಿಕಾಸ್ ಸುರಳಕರ, ಎಸ್ಪಿ ಪ್ರಕಾಶ ನಿಕ್ಕಂ, ಇಂಡಿ ಉಪ ವಿಭಾಗಾಧಿಕಾರಿ ಆನಂದ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಪ್ರಭಾರ ಹಿರಿಯ ಭೂವಿಜ್ಞಾನಿ ಮೋಹನ ಇದ್ದರು.
ಜಿಲ್ಲೆಯಲ್ಲಿ ಅನಧಿಕೃತ ಮರಳು ಸಾಗಾಣಿಕೆ ಮೇಲೆ ತೀವ್ರ ನಿಗಾ ಇಡಬೇಕು. ಪೊಲೀಸ್ ಇಲಾಖೆ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಅಕ್ರಮ ಮರಳು ಸಾಗಾಣಿಕೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಬೇಕು. ಕಲ್ಲು ಗಣಿಗಾರಿಕೆ ಸೇರಿದಂತೆ ಪರಿಸರ ಹಾನಿಗೊಳಿಸುವಂತಹ ಚಟುವಟಿಕೆಯನ್ನು ನಿಯಂತ್ರಿಸುವ ಜೊತೆಗೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲು ಟಾಸ್ಕ್ಫೋರ್ಸ್ ಸಮಿತಿಗೆ ವರದಿ ಸಲ್ಲಿಸಲು ಪರಿಸರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.