ವಿಜಯಪುರ: ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ಭಾವಚಿತ್ರ ಸಹಿತ ಗಣೇಶೋತ್ಸವದಲ್ಲಿ ಬೆಂಬಲಿಗರು ಹಾಕಿದ್ದ ಬ್ಯಾನರನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ನಗರದಲ್ಲಿ ನಡೆದಿದೆ.
ನಗರದ ವಿವಿಧ ವೃತ್ತಗಳಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬೆಂಬಲಿಗರು ತಮ್ಮ ಭಾವಚಿತ್ರ ಸಹಿತ ಶಾಸಕ ಯತ್ನಾಳ, ಅವರ ಪುತ್ರ ರಾಮನಗೌಡ ಅವರ ಭಾವಚಿತ್ರ ಇರುವ ಗಣೇಶೋತ್ಸವ ಹಬ್ಬದ ಶುಭಾಶಯ ಕೋರುವ ಬ್ಯಾನರ್ ಅಳವಡಿಸಿದ್ದಾರೆ. ಆದರೆ ಕಿಡಿಗೇಡಿಗಳು ನಗರದ ವಾಟರ್ ಟ್ಯಾಂಕ್, ಜೋರಾಪುರಪೇಠ ಪ್ರದೇಶದಲ್ಲಿ ಅಳವಡಿಸಿರುವ ಬ್ಯಾನರ್ ಹರಿದು ಹಾಕಿದ್ದಾರೆ.
ವಿಷಯ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿರುವ ವಿಜಯಪುರ ಮಹಾನಗರ ಪಾಲಿಕೆ ಸಿಬ್ಬಂದಿ ಸಹಿತ ಸ್ಥಳಕ್ಕೆ ಧಾವಿಸಿರುವ ಪೊಲೀಸರು ಹರಿದ ಬ್ಯಾನರ್ ತೆರವುಗೊಳಿಸಿದ್ದಾರೆ.
ಸ್ಥಳಕ್ಕೆ ಧಾವಿಸಿರುವ ಪೊಲೀಸರು ಕೃತ್ಯ ಎಸಗಿರುವ ಕಿಡಿಗೇಡಿಗಳ ಪತ್ತೆಗಾಗಿ ಘಟನಾ ಪ್ರದೇಶದ ಸಿ.ಸಿ. ಕೆಮೆರಾಗಳ ಪರಿಶೀಲನೆಗೆ ಮುಂದಾಗಿದ್ದಾರೆ.