ವಿಜಯಪುರ: ಜಿಲ್ಲೆಯ ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳ 100 ಅಡಿ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಸೇವನೆ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ನಡೆದ ಜಿಲ್ಲಾ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಎಚ್ಚರಿಕೆವಿಲ್ಲದ ತಂಬಾಕು ಉತ್ಪನ್ನ ಮತ್ತು ಇ-ಸಿಗರೇಟ್‌ಗಳನ್ನು ನಿಷೇಧಿ ಸಲಾಗಿದ್ದು ಈ ಕುರಿತು ಸೂಕ್ತ ನಿಗಾ ಇಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ವೈದ್ಯಕೀಯ ಕಾಲೇಜ್, ಎಂಜನಿಯರಿಂಗ್ ಕಾಲೇಜ್ ವ್ಯಾಪ್ತಿಯಲ್ಲಿ ಇ-ಸಿಗರೇಟ್ ಮಾರಾಟವಾಗದಂತೆ ಎಚ್ಚರಿಕೆ ವಹಿಸಬೇಕು. ಜಿಲ್ಲೆಯ ಶಾಲೆ ಕಾಲೇಜ್, ಸರ್ಕಾರಿ ಕಚೇರಿ, ಪ್ರವಾಸಿ ತಾಣಗಳನ್ನು ತಂಬಾಕು ಮುಕ್ತ ಪ್ರದೇಶಗಳನ್ನಾಗಿಸಲು ಕ್ರಮ ಕೈಗೊಳ್ಳುವತೆ ಸಂಬಂ ಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಕೋಟ್ಪಾ ಕಾಯ್ದೆ ಉಲ್ಲಂಘಿಸಿ ತಂಬಾಕು ಉತ್ಪನ್ನ ಮಾರಾಟವಾಗದಂತೆ ಎಚ್ಚರ ವಹಿಸಬೇಕು. ಈ ಕಾಯ್ದೆಯಡಿ ಉನ್ನತ ಅನುಷ್ಠಾನಕ್ಕಾಗಿ ಆಯ್ಕೆಯಾದ ಸಿಂದಗಿ ಮತ್ತು ವಿಜಯಪುರ ತಂಬಾಕು ಮುಕ್ತವನ್ನಾಗಿಸಲು ಪ್ರಯತ್ನಿಸಬೇಕು. ಹೆಚ್ಚು ತಂಬಾಕು ಸೇವನೆ ಇರುವ ಪ್ರದೇಶ, ತಾಲೂಕುಗಳನ್ನು ಗುರುತಿಸಿ ಅರಿವು ಮೂಡಿಸಬೇಕು. ಆಯಾ ತಾಲೂಕಾವಾರು ತಹಶೀಲ್ದಾರ್‌ರು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳ ಸಹಕಾರೊಂದಿಗೆ ಜಾಗೃತಿ ಕಾರ್ಯಕ್ರಮಗಳನ್ನು ಜಿಲ್ಲಾ ತಂಬಾಕು ನಿಯಂತ್ರಣ ಘಟಕದಿಂದ ಆಯೋಜಿಸಬೇಕು ಎಂದು ಸೂಚಿಸಿದರು.
ತಂಬಾಕು ನಿಯಂತ್ರಣ ಘಟಕದ ನಿಯಂತ್ರಣಾಧಿಕಾರಿ ಮಹಾಂತೇಶ ಉಳ್ಳಾಗಡ್ಡಿ, ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ| ಮಲ್ಲನಗೌಡ ಬಿರಾದಾರ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.