Advertisement

Vijayapura; ಸಾತ್ವಿಕ್ ಯಶಸ್ವಿ ರಕ್ಷಣಾ ಕಾರ್ಯಾಚರಣೆ ತಂಡಕ್ಕೆ ಜಿಲ್ಲಾಡಳಿತದಿಂದ ಸನ್ಮಾನ

11:18 AM Apr 05, 2024 | Team Udayavani |

ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಕೊಳವೆ ಬಾವಿಗೆ ಬಿದ್ದಿದ್ದ ಮಗು ಸಾತ್ವಿಕನ ರಕ್ಷಣಾ ಕಾರ್ಯಾಚರಣೆ ಯಶಸ್ವಿಗೊಳಿಸಿದ ತಂಡಕ್ಕೆ ವಿಜಯಪುರ ಜಿಲ್ಲಾಡಳಿತ ಕೃತಜ್ಞತೆ ಸಲ್ಲಿಸಿದ್ದು, ಸನ್ಮಾನಿಸುವ ಮೂಲಕ ಬೀಳ್ಕೊಟ್ಟಿದೆ.

Advertisement

ಬುಧವಾರ ಸಂಜೆ ಲಚ್ಯಾಣ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ 14 ತಿಂಗಳ ಮಗು ಸಾತ್ವಿಕನನ್ನು 21 ಗಂಟೆಗಳಲ್ಲಿ ಸುರಕ್ಷಿತವಾಗಿ ಮೇಲೆತ್ತುವ ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಸ್ಥಳೀಯ ಅಗ್ನಿಶಾಮಕ ಸೇವೆ ದಳ, ಕಲಬುರಗಿ, ಬೆಳಗಾವಿಯ ಎಸ್.ಡಿ.ಆರ್.ಎಫ್, ಹೈದರಾಬಾದ್ ಎನ್.ಡಿ.ಆರ್.ಎಫ್. ತಂಡಗಳ ಅಧಿಕಾರಿಗಳು-ಸಿಬ್ಬಂದಿಯನ್ನು ವಿಜಯಪುರ ಜಿಲ್ಲಾಡಳಿತ ಕೃತಜ್ಞತಾ ಪೂರ್ವಕವಾಗಿ ಗೌರವಿಸಿದೆ.

ಸಾತ್ವಿಕ ರಕ್ಷಣಾ ಕಾರ್ಯಾಚರಣೆ ಯಲ್ಲಿ ಪಾಲ್ಗೊಂಡ ತಂಡಗಳ ಮುಖಸ್ಥರು, ಸದಸ್ಯರನ್ನು ನಗರದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಸರಳ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಭೂಬಾಲನ್, ಜಿ.ಪಂ. ಸಿಇಒ ರಿಷಿ ಆನಂದ, ಎಸ್ಪಿ ಋಷಿಕೇಶ ಭಗವಾನ್ ಜಂಟಿಯಾಗಿ ಸನ್ಮಾನಿಸಿ ಗೌರವಿಸಿ, ಬೀಳ್ಕೊಟ್ಟರು.

Advertisement

Udayavani is now on Telegram. Click here to join our channel and stay updated with the latest news.

Next