Advertisement

ವಿಜಯಪುರ: ಬಾವಿಯಲ್ಲಿ ಯುವಕ-ಅಪ್ರಾಪ್ತೆಯ ಶವ ಪತ್ತೆ, ಪ್ರೇಮಪಸ್ರಂಗ ಶಂಕೆ

05:59 PM Aug 09, 2020 | keerthan |

ವಿಜಯಪುರ: ಜಿಲ್ಲೆಯ ಬನಹಟ್ಟಿ ಗ್ರಾಮದ ಬಾವಿಯಲ್ಲಿ ಯುವಕ ಹಾಗೂ ಅಪ್ರಾಪ್ತ ಬಾಲಕಿಯ ಶವ ಪತ್ತೆಯಾಗಿದ್ದು, ಗ್ರಾಮದಲ್ಲಿ ಆತಂಕ ಮನೆ ಮಾಡಿದೆ.

Advertisement

ಶಿವಕುಮಾರ ಚೌದರಿ (19) ಹಾಗೂ ಶಬಾನಾ ಮುಜಾವರ (16) ಮೃತಪಟ್ಟವರು. ಇಬ್ಬರ ಶವ ಗ್ರಾಮದ ಒಂದೇ ಭಾವಿಯಲ್ಲಿ ಪತ್ತೆಯಾಗಿದ್ದು, ಯುವಕ ಹಾಗೂ ಅಪ್ರಾಪ್ತೆ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ.

ಇಬ್ಬರ ಪ್ರೀತಿಗೆ ಮನೆಯಲ್ಲಿ ಅನ್ಯ ಧರ್ಮೀಯರು ಎಂಬ ಕಾರಣಕ್ಕೆ ತಮ್ಮ ಮದುವೆಗೆ ಮನೆಯಲ್ಲಿ ವಿರೋಧ ವ್ಯಕ್ತವಾಗುವ ಭಯದಲ್ಲಿ ಇಬ್ಬರೂ ಭಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದೆ.

ಈ ಕುರಿತು ಸ್ಥಳಕ್ಕೆ ದೇವರಹಿಪ್ಪರಗಿ ಪೊಲೀಸ್ ಠಾಣಾ ಪಿಎಸ್ ಐ ರವಿ ಯಡವಣ್ಣವರ ಹಾಗೂ ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸಿದ್ದು, ಪೊಲೀಸರು ತನಿಖೆ ನೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next