ವಿಜಯಪುರ: ಅಯೋಧ್ಯಾ ಶ್ರೀರಾಮ ಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ದೇಶದ ದೇವಾಲಯಗಳನ್ನು ಸ್ವಚ್ಛಗೊಳಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕರೆಯ ಮೇರೆಗೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ನಗರದ ಅದೃಷ್ಟಲಕ್ಷ್ಮೀ ದೇವಸ್ಥಾನ ಸ್ವಚ್ಛತಾ ಕಾರ್ಯ ನಡೆಸಿದರು.
ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ಲೋಕಾರ್ಪಣೆ, ಶ್ರೀರಾಮ ಮೂರ್ತಿ ಪ್ರಾಣಪ್ರತಿಷ್ಠೆ ನಡೆಯಲಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಎಲ್ಲ ದೇಗುಲ, ತೀರ್ಥ ಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ. ಪರಿಣಾಮ ವಿಜಯಪುರ ಮಹಾನಗರ ಪಾಲಿಕೆಯ ವಾರ್ಡ್ ನಂ.1 ರ ಅದೃಷ್ಟಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಸ್ವಚ್ಚತಾ ಕಾರ್ಯ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ವಿಜಯಪುರ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ, ಶ್ರೀರಾಮ ಜನ್ಮಭೂಮಿಯಲ್ಲಿ ಶ್ರೀರಾಮನ ಭವ್ಯ ಮಂದಿರ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದೆ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆ ಆಗುತ್ತಿರುವುದು ಭಾರತೀಯರ ಭಕ್ತಿಯ ಪ್ರತೀಕ. ಇದು ಪ್ರತಿಯೊಬ್ಬರು ಸಂತಸ ಪಡುವ ಸಂಗತಿ ಎಂದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶ್ರೀರಾಮ ಮಂದಿರ ಲೋಕಾರ್ಪಣೆ ಕ್ಷಣವನ್ನು ಅವಿಸ್ಮರಣೀಯ ಮಾಡುವುದಕ್ಕಾಗಿ ಜನಸೇವಾ ಕಾರ್ಯ, ಭಕ್ತಿ ಭಾವ ಮೂಡಿಸುವ ಮಂದಿರಗಳ ಸ್ವಚ್ಛತೆ ಮೂಲಕ ಭಕ್ತಿ ಸೇವೆಯಿಂದ ಸಂಭ್ರಮಿಸಲಾಗುತ್ತಿದೆ ಎಂದರು.
ವಿಜಯಪುರ ಜಿಲ್ಲೆಯಲ್ಲಿಯೂ ಬಿಜೆಪಿ ಕಾರ್ಯಕರ್ತರು ಧಾರ್ಮಿಕ ಕೇಂದ್ರಗಳನ್ನು ಸ್ವಚ್ಛಗೊಳಿಸುವ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದೇವೆ ಎಂದರು.
ವಿಜಯಪುರ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಬಸವರಾಜ ಹೂಗಾರ್, ಮಹೇಶ ಒಡೆಯರ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಶಿಂದೆ, ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಶ್ರೀಧರ ಬಿಜ್ಜರಗಿ, ಪರಶುರಾಮ ಹೊಸಪೇಟ, ದಶರಥ ಕಾಂಬಳೆ, ದಶರಥ ಕ್ಷೀರಸಾಗರ ಸೇರಿದಂತೆ ಇತರರು ದೇವಸ್ಥಾನ ಸ್ವಚ್ಛತಾ ಕಾರ್ಯ ಸೇವಾ ಕಾರ್ಯದಲ್ಲಿ ಪಾಲ್ಹೊಂಡಿದ್ದರು.