Advertisement

ವಿಜಯಪುರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

06:32 PM Jan 19, 2021 | Nagendra Trasi |

ವಿಜಯಪುರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಹಿಳಾ ಸಂಘಟನೆ ವಿಜಯಪುರ ಜಿಲ್ಲಾ ಸಮಿತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಿ ಅಪರ
ಜಿಲ್ಲಾ ಧಿಕಾರಿ ಡಾ| ಔದ್ರಾಮ ಮೂಲಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಈ ವೇಳೆ ಜನವಾದಿ ಮಹಿಳಾ ಸಂಘಟನೆಯ ಸುರೇಖಾ ರಜಪೂತ ಮಾತನಾಡಿ, ಕೃಷಿ ಕ್ಷೇತ್ರದಲ್ಲಿ ದುಡಿಯುವ ಮಹಿಳೆಯರನ್ನು ರೈತರೆಂದು ಗುರುತಿಸಬೇಕು. ರೈತ ವಿರೋ ಧಿ ಕೃಷಿ ಕಾಯ್ದೆ, ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆ, ಕಾರ್ಮಿಕ ಸಂಹಿತೆ ಹಿಂಪಡೆಯಬೇಕು. ರಾಜ್ಯ ಸರ್ಕಾರ ಜಾರಿಗೆ ಮುಂದಾಗಿರುವ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಗೋಹತ್ಯಾ ನಿಷೇಧ ಕಾಯ್ದೆ ಹಿಂದಕ್ಕೆ ಪಡೆಯಬೇಕು.

Advertisement

ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳು, ಮೈಕ್ರೋಫೈನಾನ್‌ ನಿಂದ ಮಹಿಳೆಯರು ಪಡೆದಿರುವ ಸಾಲವನ್ನು ಬಡ್ಡಿ ಸಹಿತ ಮನ್ನಾ ಮಾಡಬೇಕು. ಜೊತೆಗೆ ಸಾಲ
ಮರು ಪಾವತಿಗೆ ಕಿರುಕುಳ ನೀಡುವ ಏಜೆನ್ಸಿಗಳ ವಿರುದ್ಧ ಕ್ರಮ ಕೈಗೊಳ್ಳಿ, ಬಡ್ಡಿ ರಹಿತ ಸಾಲ ಸೌಲಭ್ಯ ನೀಡಿ, ಮಹಿಳೆಯರ ಮೇಲೆ ನಡೆಯುತ್ತಿರುವ
ದೌರ್ಜನ್ಯಗಳ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಮಹಿಳಾ ಪರ ಕಾನೂನುಗಳನ್ನು ಸಮರ್ಪಕವಾಗಿ ಜಾರಿಗೊಳಿಸಿ. ನಿರ್ಭಯ ನಿಧಿ ಸಮರ್ಕವಾಗಿ ಜಾರಿ ಹಾಗೂ ಜಸ್ಟೀಸ್‌ ವರ್ಮಾ ಸಮಿತಿಯ ಶಿಫಾರಸುಗಳನ್ನು ಜಾರಿಗೆ ತನ್ನಿ. ಜೀವನಾಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ಕೇರಳ ಮಾದರಿಯಲ್ಲಿ ಪಡಿತರ ವ್ಯವಸ್ಥೆಯನ್ನು ಸಾರ್ವತ್ರಿಕರಿಸಬೇಕು. ಆದಾಯ ತೆರಿಗೆ ಪಾವತಿದಾರರ ಕುಟುಂಬದ ಹೊರತಾಗಿ ಇತರ ಕುಟುಂಬಗಳಿಗೆ 6 ತಿಂಗಳು 10 ಕೆಜಿ ಉಚಿತ ಆಹಾರ ಧಾನ್ಯ ವಿತರಿಸಿ, 7500 ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ಜಮಾ ಮಾಡಬೇಕು ಎಂದು ಆಗ್ರಹಿಸಿದರು.

ಶುಚಿ ಯೋಜನೆಯನ್ನು ಮುಂದುವರಿಸಬೇಕು. ಕೋವಿಡ್‌ ಅವ ಧಿಯಲ್ಲಿ ಸ್ಥಗಿತಗೊಂಡಿರುವ ಮಾತೃಶ್ರೀ ಯೋಜನೆ ಮುಂದುವರಿಬೇಕು. ಉದ್ಯೋಗ ಖಾತ್ರಿ
ಯೋಜನೆ ಸಮರ್ಪಕ ಜಾರಿ ಮೂಲಕ ಕನಿಷ್ಠ 200 ದಿನ ಕೆಲಸ ಹಾಗೂ 700 ರೂ. ಕೂಲಿ ನೀಡಬೇಕು. ನಗರ ಉದ್ಯೋಗ ಖಾತ್ರಿ ಜಾರಿಗೆ ಬರಬೇಕು.
ಯುವ ಜನರ ಆಯ್ಕೆ ಹಕ್ಕನ್ನು ಮೊಟಕುಗೊಳಿಸುವ ಮತಾಂತರ ಮದುವೆ ತಡೆ ಕಾನೂನು ತರುವ ಪ್ರಸ್ತಾಪ ಕೈ ಬಿಡಬೇಕು ಎಂದು ಒತ್ತಾಯಿಸಿದರು.
ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಭೀಮಶಿ ಕಲಾದಗಿ ಮಾತನಾಡಿ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿಗೆ ಮಾರಕವಾದ ಕಾನೂನು ಹಿಂಪಡೆಯುವಂತೆ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟದಲ್ಲಿ 150 ರೈತರು ಮೃತಪಟ್ಟಿದ್ದಾರೆ. ಕೃಷಿ ಕಾಯ್ದೆ ನೀತಿಗಳನ್ನು ವಾಪಸ್‌
ಪಡೆಯಬೇಕು. ಕೂಡಲೇ ಮೃತ ರೈತರಿಗೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ಕೂಡಾ ಉಳ್ಳವರ ಪರವಾಗಿ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿದೆ. ಅವ್ಯವಸ್ಥಿತ ಆಡಳಿತ, ಕೊರೊನಾ ಕಾಲದಲ್ಲಿ ಆಯೋಜಿತ ಲಾಕ್‌ಡೌನ್‌ಗಳಿಂದ ದೇಶದ ಆರ್ಥಿಕತೆ ಸಂಪೂರ್ಣ ಹದಗೆಟ್ಟಿದೆ. ಸಂಕಷ್ಟದಿಂದ  ದೇಶವನ್ನು ಪಾರು ಮಾಡಬೇಕಾದ ಸರಕಾರ, ಜನರು ರೋಗಭೀತಿಯಲ್ಲಿ ಅತಂತ್ರರಾಗಿದ್ದಾಗ ಕರಾಳ ಕೃಷಿ ಮಸೂದೆಗಳನ್ನು ಸುಗ್ರೀವಾಜ್ಞೆಗಳ ಮೂಲಕ ಜಾರಿಗೆ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ರೈತ ವಿರೋ ಧಿ ಕಾಯ್ದೆಗಳ ವಿರುದ್ಧ ದೆಹಲಿ ರೈತರ ಹೋರಾಟ ಬೆಂಬಲಿಸಿ ಜ. 23ರಂದು ನಡೆಯುತ್ತಿರುವ ಐತಿಹಾಸಿಕ ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು
ಪಾಲ್ಗೊಂಡು ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕು ಎಂದು ಮನವಿ ಮಾಡಿದರು.

Advertisement

ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ,ಸೋನುಬಾಯಿ ಬ್ಯಾಳಿ, ಸಾಯಿಬಿ ಶೇಖ,ಅನುಸೋಯಾ ಹಜೇರಿ, ಸುಮಿತ್ರಾ ಘೋಣಸಗಿ,ಜೈನುಬಿ ಬದಾಮಿ, ಕುಸುಮಾ ಹಜೇರಿ, ಮಹಾದೇವಿ ಕೂಡಲಗಿ, ಗೀತಾ ಚಲವಾದಿ, ರೈತ ಸಂಘದ ಬಸವನಬಾಗೇವಾಡಿ ತಾಲೂಕಾಧ್ಯಕ್ಷೆ ಶಾರದಾ ಲಮಾಣಿ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next