ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಚುನಾವಣೆ ಸಂದರ್ಭದಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಇದ್ದಕ್ಕಾಗಿ ವಿಜಯಪುರ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರೂ ಆಗಿರುವ ಜಿ.ಪಂ. ಸಿಇಒ ರಾಹುಲ್ ಶಿಂಧೆ ಅವರನ್ನು ರಾಜ್ಯ ಚುನಾವಣಾ ಆಯೋಗ ರಾಜ್ಯ ಮಟ್ಟದ ಬೆಸ್ಟ್ ಪರ್‍ಫಾರ್ಮೆನ್ಸ್ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಜ.25 ರಂದು ಬೆಂಗಳೂರಿನಲ್ಲಿ ರಾಜಭವನದಲ್ಲಿ ನಡೆಯುವ ರಾಷ್ಟ್ರೀಯ ಮತದಾರರ 13ನೇ ದಿನಾಚರಣೆ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಸಿಇಒ ರಾಹುಲ್ ಶಿಂಧೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಜಿಲ್ಲೆಯಾದ್ಯಂತ ಮತದಾರರ ಜಾಗೃತಿ ಮೂಡಿಸಲು ಸತತವಾಗಿ ಜಾಗೃತಿ ಕಾರ್ಯಕ್ರಮಗಳಾದ ಭವಿಷ್ಯದ ಮತದಾರರು ಮತ್ತು ಯುವ ಮತದಾರರಾದ ಶಾಲಾ-ಕಾಲೇಜುಗಳ ವಿಧ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಜಿಲ್ಲೆಯಾದ್ಯಂತ ಯುವ ಮತದಾರರ ಹೊಸ ನೊಂದಣಿ ಪ್ರಕ್ರಿಯೆ ಯಶಸ್ವಿಗೊಳಿಸಿದ್ದಾರೆ.
ವಿಜಯಪುರ ನಗರದಲ್ಲಿ ಸುಮಾರು 2 ಸಾವಿರ ವಿದ್ಯಾರ್ಥಿಗಳೊಂದಿಗೆ ಕಾಲ್ನಡಿಗೆ ಜಾಥಾ ಮೂಲಕ ಮತದಾರರಲ್ಲಿ ಮತದಾನ ಮಹತ್ವದ ಕುರಿತು ಜಾಗೃತಿ ಮೂಡಿಸಿದ್ದಾರೆ. ಮತದಾನದ ಮಹತ್ವದ ಬಗ್ಗೆ ಜನರಲ್ಲಿ ಜಾಗೃತೆ ಮೂಡಿಸಲು ಪ್ರಚಾರ ಸಾಮಗ್ರಿ ವಿತರಿಸಿ ಜಿಲ್ಲೆಯಲ್ಲಿ ಹೆಚ್ಚಿನ ಮತದಾನ ಆಗುವ ದಿಶೆಯಲ್ಲಿ ಸೂಕ್ತ ಕ್ರಮ ಕೈಕೊಂಡಿರುತ್ತಾರೆ.
ವಿಜಯಪುರ ಜಿಲ್ಲೆ ಪ್ರಶಸ್ತಿಗೆ ಭಾಜನವಾಗಲು ಸ್ವೀಪ್ ಸಮಿತಿಯ ಜಾಗೃತಿ ಚಟುವಟಿಕೆ ಸಂದರ್ಭದಲ್ಲಿ ಸಂಪೂರ್ಣ ಸಹಕಾರ ನೀಡಿದ ಜಿಲ್ಲಾಡಳಿತ, ಅಧಿಕಾರಿಗಳು, ಶಾಲಾ-ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಸಂಘ ಸಂಸ್ಥೆಗಳು, ಮಾಧ್ಯಮ ಮಿತ್ರರು, ಎಲ್ಲಕ್ಕಿಂತ ಹೆಚ್ಚಾಗಿ ಜಿಲ್ಲೆಯ ಜನರು ನೀಡಿದ ಸಹಕಾರ ಪ್ರಮುಖ ಕಾರಣ ಎಂದು ಸಿಂಧೆ ಸ್ಮರಿಸಿದ್ದಾರೆ.
ಇದನ್ನೂ ಓದಿ: ಕೊರಟಗೆರೆ; ಬಲಿಜ ಸಂಕಲ್ಪ ಹೋರಾಟ ಪ್ರತಿಭಟನೆಯಲ್ಲಿ ಭಾಗವಹಿಸಲು ಮನವಿ