Advertisement

ಕೃಷಿ ಸಮ್ಮಾನ ಸದ್ಬಳಕೆಯಾಗಲಿ

04:18 PM Jan 20, 2020 | Naveen |

ವಿಜಯಪುರ: ಪ್ರಧಾನ ಮಂತ್ರಿ ಕೃಷಿ ಸಮ್ಮಾನ ನಿಧಿ ಯೋಜನೆಯಡಿ ರೈತರ ಖಾತೆಗೆ ವರ್ಷಕ್ಕೆ 6 ಸಾವಿರ ಮತ್ತು ರಾಜ್ಯ ಸರ್ಕಾರದಿಂದ 4 ಸಾವಿರ ಒಟ್ಟು 10 ಸಾವಿರ ರೂ. ಸಹಾಯಧನ ನೀಡಲಾಗುತ್ತಿದೆ. ರೈತರು ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡುವ ಈ ಸೌಲಭ್ಯವನ್ನು ಅನ್ನದಾತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಸುರೇಶಗೌಡ ಬಿರಾದಾರ ಹೇಳಿದರು.

Advertisement

ವಿಜಯಪುರ ತಾಲೂಕಿನ ತೊರವಿ ಜಾನುವಾರು ಜಾತ್ರೆಯಲ್ಲಿ ವಾರ್ತಾ ಇಲಾಖೆಯಿಂದ ಪ್ರೇರಣಾ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಮ್ಮಿಕೊಂಡಿದ್ದ ನಾಟಕ ಪ್ರದರ್ಶನವನ್ನು ಡೋಲು ಬಾರಿಸಿ ಚಾಲನೆ ನೀಡಿದ ಅವರು ಮಾತನಾಡಿದರು.

ರೈತ ಸಿರಿ ಯೋಜನೆಯಡಿ ಸಿರಿಧಾನ್ಯ ಬೆಳೆದ ರೈತರಿಗೆ 1 ಹೆಕ್ಟೇರ್‌ಗೆ 10 ಸಾವಿರ ರೂ. ಪ್ರೋತ್ಸಾಹ ಧನ, ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿಗೆ ತುಂತುರು ನೀರಾವರಿ ಧನ ಸಹಾಯ, ಕೃಷಿ ಭಾಗ್ಯಯೋಜನೆಯಡಿ ಕೃಷಿಹೊಂಡ ಹಾಗೂ
ಘಟಕಕ್ಕೆ ಧನ ಸಹಾಯ ನೀಡಲಾಗುತ್ತಿದೆ. ಸರ್ಕಾರದ ಈ ಎಲ್ಲ ಯೋಜನೆಗಳು ರೈತರಿಗೆ ತಲುಪುವ ನಿಟ್ಟಿನಲ್ಲಿ ಕಾರ್ಯ ಮಾಡಬೇಕಿದೆ ಎಂದರು.

ಆಯುಷ್ಮಾನ್‌- ಆರೋಗ್ಯ ಭಾಗ್ಯ ಯೋಜನೆಯು ದೇಶದ ಜನರಿಗೆ ಅತ್ಯುತ್ತಮ ಆರೋಗ್ಯ ಯೋಜನೆಯಾಗಿದೆ. ಎಲ್ಲ ವರ್ಗದ ಜನ ಸಾಮಾನ್ಯರಿಗೆ ತಲುಪುವ ಯೋಜನೆಯಾಗಿದ್ದು ಸರ್ಕಾರದ ಎಲ್ಲ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ರೈತರು ಈ ಯೋಜನೆಗಳ ಲಾಭ ಪಡೆದು ಕೃಷಿಯಲ್ಲಿ ಮತ್ತಷ್ಟು ಹೆಚ್ಚಿನ ಆಸಕ್ತಿ ವಹಿಸಲು ಮುಂದಾಗಬೇಕು. ಅಲ್ಲದೆ ಕೃಷಿ ಯಂತ್ರಧಾರೆ ಯೋಜನೆಯಡಿ ಕೃಷಿ ಚಟುವಟಿಕೆಗೆ ಬೇಕಾದ ಆಧುನಿಕ ಸಾಮಗ್ರಿಗಳು ಕೈಗೆಟಕುವ ದರದಲ್ಲಿ ಸಿಗುತ್ತಿವೆ. ಕೃಷಿ ಅಧಿ ಕಾರಿಗಳನ್ನ ಭೇಟಿ ಮಾಡಿ ಕೃಷಿಗೆ ಸಂಬಂಧಿಸಿದ ಸವಲತ್ತುಗಳನ್ನು ಪಡೆಯಬೇಕು ಎಂದು ಅವರು ಕರೆ ನೀಡಿದರು.

ಪ್ರೇರಣಾ ಗ್ರಾಮೀಣಾಭಿವೃದ್ಧಿ ಸಂಸ್ಥೆ ಕಲಾವಿದರು “ನೇಗಿಲ ಯೋಗಿ’ ನಾಟಕ ಪ್ರದರ್ಶಿಸಿದರು. ಕೃಷಿ ಸಮ್ಮಾನ ಯೋಜನೆ, ನೇಕಾರರ ಸಾಲಮನ್ನಾ, ಮೀನುಗಾರರ ಸಾಲ ಮನ್ನಾ ಹಾಗೂ ಕೃಷಿ ಭಾಗ್ಯ ಕುರಿತು ಬೀದಿನಾಟಕ ಪ್ರದರ್ಶಿಸಿ ಜನರ ಮೆಚ್ಚುಗೆ ಪಡೆಯಿತು. ಶಿರಬೂರದ ಸರಸ್ವತಿ ಗಾಯನ ಸಂಘದ ಕಲಾವಿದರು ಜಾನಪದ ಸಂಗೀತದ ಮೂಲಕ ಸರ್ಕಾರದ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಿದರು.

Advertisement

ಎಪಿಎಂಸಿ ಸದಸ್ಯರಾದ ಸುರೇಶ ತಳವಾರ, ಚಂದ್ರಶೇಖರ ಪಾಟೀಲ, ಸಾಹೇಬಗೌಡ ಪಾಟೀಲ, ಹಣಮಂತ ಲೊಕುರಿ, ವಿಶ್ವನಾಥ ಪಾಟೀಲ,ಅಣ್ಣರಾಯ ದಶ್ಯಾಳ, ಪೀರಗೊಂಡ ಗದ್ಯಾಳ, ಎಪಿಎಂಸಿ ಕಾರ್ಯದರ್ಶಿ ಆರ್‌. ಎಂ. ಕುಮಾರಸ್ವಾಮಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next