Advertisement

ಮೋದಿ ಶಕ್ತಿ ಕುಗ್ಗಿಸಲು RJD, ಕಾಂಗ್ರೆಸ್ ಗೆ ವಿಜಯೇಂದ್ರ ಹಣ ನೀಡಿದ್ದಾರೆ: ಯತ್ನಾಳ್ ಬಾಂಬ್

02:14 PM Feb 18, 2021 | Team Udayavani |

ಬೆಂಗಳೂರು: ಬಿಜೆಪಿ ವರಿಷ್ಠರು ನೀಡಿದ್ದ ಶೋಕಾಸ್ ನೋಟಿಸ್ ಗೆ 11 ಪುಟಗಳಷ್ಟು ಉತ್ತರ ನೀಡಿದ್ದೇನೆ. ಸಿಎಂ ಬಿಎಸ್ ಯಡಿಯೂರಪ್ಪ ಕುಟುಂಬದ ಬಗ್ಗೆ ಬರೆದಿದ್ದೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

Advertisement

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಶಕ್ತಿ ಕುಗ್ಗಿಸಲು ವಿಜಯೇಂದ್ರ ಬಿಹಾರ ಚುನಾವಣೆಗೆ ಫಂಡಿಂಗ್ ಮಾಡಿದ್ದಾರೆ. ಅಲ್ಲಿ ಬಿಜೆಪಿ ಸೋಲಿಸಲು ಆರ್ ಜೆಡಿ, ಕಾಂಗ್ರೆಸ್ ಗೆ ವಿಜಯೇಂದ್ರ ಫಂಡಿಂಗ್ ಮಾಡಿದ್ದಾರೆ ಎಂದು ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

ಇದನ್ನೂ ಓದಿ:ಸಿಂಘು ಗಡಿಯಲ್ಲಿ ಮೃತಪಟ್ಟ ರೈತರಿಗೆ ಚಿತ್ರದುರ್ಗ ಜಿ.ಪಂ ಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಕೆ

ಮಾರಿಷಸ್ ವಿಚಾರವನ್ನು ಬರೆದಿದ್ದೇನೆ. ವಿಜಯೇಂದ್ರ ಮಾರಿಷಸ್ ಗೆ ಯಾಕೆ ಹೋಗಿದ್ದರು. ಮಾರಿಷಸ್ ಗೆ ಯಾವ ವಿಮಾನದಲ್ಲಿ ಹೋಗಿದ್ದರು, ಆ ವಿಮಾನದ ನಂಬರ್ ಕೂಡ ಬರೆದಿದ್ದೇನೆ.  ಎಷ್ಟು ಜನ ಹೋಗಿದ್ದರು ಎಂಬ ವಿಚಾರ ಕೂಡಾ ಬರೆದಿದ್ದೇನೆ.  ಮಾಜಿ ಗೃಹ ಸಚಿವರೊಬ್ಬರ ಪಿಎ ಮೂಲಕ ಮಾರಿಷಸ್ ಗೆ ಏನೇನು ತೆಗೆದುಕೊಂಡು ಹೋಗಿದ್ದಾರೆ ಎನ್ನುವುದನ್ನು ಕೂಡಾ ಉಲ್ಲೇಖಿಸಿದ್ದೇನೆ. ಇದರ ತನಿಖೆ ಮಾಡಲು‌ ಆಗ್ರಹಿಸಿದ್ದೇನೆ ಎಂದರು.

Advertisement

ಯಡಿಯೂರಪ್ಪ ಕುಟುಂಬದ ಬಗ್ಗೆಯೂ ಪತ್ರದಲ್ಲಿ ಉಲ್ಲೇಖಿಸಿದ್ದೇನೆ. ಯಡಿಯೂರಪ್ಪ ಕುಟುಂಬ ಬಿಜೆಪಿ ಶಾಸಕರನ್ನು ಗೌರವಿಸುತ್ತಿಲ್ಲ. ಬಿಜೆಪಿ ಆಶಯಕ್ಕೆ ತಕ್ಕಂತೆ ಅಧಿಕಾರ ನಡೆಸುತ್ತಿಲ್ಲ. ಯಡಿಯೂರಪ್ಪ ಅವರ ಕುಟುಂಬದ ಬಗ್ಗೆ ತನಿಖೆಗೆ ಒತ್ತಾಯಿಸಿದ್ದೇನೆ ಎಂದು ಶಾಸಕ ಯತ್ನಾಳ್ ಹೇಳಿದರು.

ಸಿಡಿ ಉಲ್ಲೇಖ: ಸಿಡಿ ಬಗ್ಗೆಯೂ ಉಲ್ಲೇಖಿಸಿದ್ದೇನೆ, ಇಡಿ ಬಗ್ಗೆಯೂ ಉಲ್ಲೇಖಿಸಿದ್ದೇನೆ. ಬಿಹಾರದ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಎಷ್ಟು ಹಣ ಕಳುಹಿಸಿದ್ದಾರೆ,  ವಿಜಯೇಂದ್ರ ಅವರ ಆಪ್ತರ ಮೂಲಕ ಹಣ ಎಷ್ಟು ಕಳುಹಿಸಿದ್ದರು ಎಂಬುದರ ಬಗ್ಗೆ ತನಿಖೆಯಾಗಬೇಕು. ಭ್ರಷ್ಟಾಚಾರ, ಹಸ್ತಕ್ಷೇಪ, ವರ್ಗಾವಣೆ ದಂಧೆ ಬಗ್ಗೆ ತನಿಖೆ ಮಾಡಬೇಕು ಎಂದು ಪತ್ರದಲ್ಲಿ ಹೇಳಿದ್ದೇನೆ ಎಂದರು.

ಇದನ್ನೂ ಓದಿ: ಬಾಂಬ್ ದಾಳಿ ನಡೆಸಿ ಸಚಿವ ಜಾಕೀರ್ ಹತ್ಯೆಗೆ ಪೂರ್ವ ಯೋಜಿತ ಸಂಚು: ಮಮತಾ ಆರೋಪ

11ಪುಟಗಳ ಪತ್ರದಲ್ಲಿ 45 ಪ್ಯಾರ ಇದೆ, ಪ್ರತಿ ಪ್ಯಾರದ ವಿಚಾರಗಳನ್ನು ಹಂತ ಹಂತವಾಗಿ ಮಾಧ್ಯಮದ ಮುಂದೆ ಹೇಳುತ್ತೇನೆ ಎಂದ ಯತ್ನಾಳ್, ನೋಟೀಸ್ ಗೆ ಉತ್ತರ ಕೊಡುವಾಗ ನಾನು ಪತ್ರದಲ್ಲಿ ಎಲ್ಲೂ ಕ್ಷಮೆ ಯಾಚಿಸಿಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next