Advertisement
ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹಾಗೂ ರಾಜ್ಯ ಚುನಾವಣ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಅವರನ್ನು ದಿಲ್ಲಿಯಲ್ಲಿ ಬುಧವಾರ ಭೇಟಿ ಮಾಡಿದ ಬಳಿಕ ಅವರು ಸುದ್ದಿಗಾರರ ಜತೆಗೆ ಮಾತನಾಡಿದರು. “ನಾನು ಬಂದ ಕೆಲಸ ಆಗಿದೆ, ಯಾವುದೇ ಸಮಸ್ಯೆ ಇಲ್ಲದೇ ಕೆಲಸ ಆಗಿದೆ’ ಎನ್ನುವ ಮೂಲಕ ಪರೋಕ್ಷವಾಗಿ ವಿರೋಧಿಗಳಿಗೆ ಸಂದೇಶ ರವಾನಿಸಿದ್ದಾರೆ ಎನ್ನಲಾಗುತ್ತಿದೆ.
45 ವರ್ಷದಿಂದ ಜನಸೇವೆ ಮಾಡಿದ್ದೇನೆ. ನನಗೆ ವ್ಯಾಮೋಹ ಇಲ್ಲ. ಮಾಧ್ಯಮದವರು ಅಭಿವೃದ್ಧಿ ಬಗ್ಗೆ ಗಮನ ಕೊಡಿ. ಪ್ರತೀ ದಿನ ಸೋಮಣ್ಣ, ಯಡಿಯೂರಪ್ಪ ಎಂದು ಸಮಯ ಹಾಳು ಮಾಡಬೇಡಿ. ನನ್ನಿಂದ ಬಿಜೆಪಿಗೆ ಅಪಚಾರ ಆಗುವುದಿಲ್ಲ. ಸಿದ್ದಗಂಗಾ ಮಠಕ್ಕೂ ನನಗೂ ಯಾವುದೇ ಮನಸ್ತಾಪ ಇಲ್ಲ. ಅಲ್ಲಿನ ಕಾರ್ಯಕ್ರಮಕ್ಕೆ ಹೋಗದೆ ಇದ್ದದ್ದು ನನ್ನ ವೈಯಕ್ತಿಕ ತೀರ್ಮಾನ. ನನ್ನನ್ನು ಬಿಟ್ಟು ಬಿಡಿ. ಯಾರೂ ಶಾಶ್ವತರಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
Related Articles
Advertisement
ನನ್ನ ಇಲಾಖೆ ಕೆಲಸದ ವಿಚಾರವಾಗಿ ಇಲ್ಲಿಗೆ ಬಂದಿ¨ªೆ. ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದೇನೆ ಅದಾದ ಬಳಿಕ ಸಚಿವ ಪ್ರಹ್ಲಾದ್ ಜೋಷಿಯವರನ್ನು ಭೇಟಿಯಾಗಿದ್ದೇನೆ. ಆ ಬಳಿಕ ಧರ್ಮೇಂದ್ರ ಪ್ರಧಾನ್ ಅವರನ್ನೂ ಭೇಟಿ ಮಾಡಿದ್ದೇನೆ. ಯಾವುದೇ ವೈಯಕ್ತಿಕ ಕೆಲಸಕ್ಕಾಗಿ ಬಂದಿಲ್ಲ. ಆದರೆ ನಾನು ಇಲ್ಲಿಗೆ ಬಂದ ಕೆಲಸವಾಗಿದೆ ಎಂದರು.
ಅಮಿತ್ ಶಾ ಭೇಟಿಯಾದ ಸೋಮಣ್ಣಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ವಸತಿ ಸಚಿವ ವಿ. ಸೋಮಣ್ಣ ಕೊನೆಗೂ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಹೊಸದಿಲ್ಲಿಯಿಂದ ಬೆಂಗಳೂರಿಗೆ ಹೊರಡಬೇಕು ಎನ್ನುವಷ್ಟರದಲ್ಲಿ ಶಾ ಅವರಿಂದ ಕರೆ ಬಂದ ಹಿನ್ನೆಲೆಯಲ್ಲಿ ಪ್ರಯಾಣ ರದ್ದುಗೊಳಿಸಿದ್ದಾರೆ. ಅಮಿತ್ ಶಾ ಭೇಟಿಯ ವೇಳೆ ವಸತಿ ಸಚಿವರು ತಮ್ಮೆಲ್ಲ ಒಳಬೇಗುದಿಯನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಎಲ್ಲದಕ್ಕಿಂತ ಹೆಚ್ಚಾಗಿ ವಿಜಯನಗರದಲ್ಲಿರುವ ತಮ್ಮ ನಿವಾಸಕ್ಕೆ ನೀವು ಭೇಟಿ ನೀಡಿದ ಬಳಿಕ ನಾನು ಯಡಿಯೂರಪ್ಪ ಅವರ ಕೆಂಗಣ್ಣಿಗೆ ಗುರಿಯಾಗಬೇಕಾಯಿತು. ನನ್ನ ಹಾಗೂ ಪುತ್ರನ ಬೆಳವಣಿಗೆಗೆ ಅಡ್ಡಿ ಮಾಡಲಾಗುತ್ತಿದೆ ಎಂದು ಸೋಮಣ್ಣ ಅಳಲು ತೋಡಿಕೊಂಡಿದ್ದಾರೆ ಎಂದು ಗೊತ್ತಾಗಿದೆ.