ವಿಜಯಪುರ : ಕಾರಿನಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಮಹಾರಾಷ್ಟ್ರದ ಸೋಲಾಪುರ ಮೂಲದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು ದಾಖಲೆ ಇಲ್ಲದ 6 ಲಕ್ಷ ರೂ. ನಗದು ಹಾಗೂ 480 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದಿರುವ ಘಟನೆ ವರದಿಯಾಗಿದೆ.
ಚಡಚಣ ಠಾಣೆ ಪೊಲೀಸರು ವಶಕ್ಕೆ ಪಡೆದಿರುವ ವ್ಯಕ್ತಿಯನ್ನು ಮಹಾರಾಷ್ಟ್ರ ರಾಜ್ಯದ ಸೋಲಾಪುರ ಮೂಲದ ವಿಜಯ ಪಡೋಳ್ಕರ್ ಎಂದು ಗುರುತಿಸಲಾಗಿದೆ.
ವಿಜಯ ಅನುಷ್ಠಾನದ ರೀತಿಯಲ್ಲಿ ವರ್ತಿಸಿದ್ದರಿಂದ ಕಾರು ತಪಾಸಣೆ ನಡೆಸಿದಾಗ ದಾಖಲಾತಿ ಇಲ್ಲದೇ ಸಾಗಿಸುತ್ತಿದ್ದ 480 ಗ್ರಾಂ ಚಿನ್ನಾಭರಣ ಹಾಗೂ 6 ಲಕ್ಷ ರೂ. ನಗದು ಸಮೇತ ವಿಜಯ ನನ್ನು ವಶಕ್ಕೆ ಪಡೆದಿದ್ದಾರೆ. ಎಂಎಚ್ 13-ಎಝಡ್ 4201 ನಂಬರಿನ ಕಾರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಡಿಎಸ್ಪಿ ಚಂದ್ರಕಾಂತ ನಂದರೆಡ್ಡಿ, ಸಿಪಿಐ ಸಾಹೇಬಗೌಡ ಪಾಟೀಲ, ಪಿಎಸೈ ಸಂಜಯ ಚಿಕ್ಕರೆಡ್ಡಿ ನೇತೃತ್ವದಲ್ಲಿ ದಾಳಿ ನಡೆಸಿದ್ದರು.
ಪೊಲೀಸರು ತಮ್ಮ ವಶದಲ್ಲಿರುವ ವಿಜಯನನ್ನು ಚಿನ್ನಾಭರಣ, ನಗದು ಮೂಲದ ಕುರಿತು, ಎಲ್ಲಿಂದ, ಎಲ್ಲಿಗೆ ತೆಗೆದುಕೊಂಡು ಹೋಗಲಾಗುತ್ತಿದೆ ಎಂಬ ಬಗ್ಗೆ ವಿಚಾರಣೆ ನಡೆಸಿದ್ದಾರೆ.