Advertisement

Vijaypur; ಕಾಂಗ್ರೆಸ್ ಜಿಲ್ಲಾ ಕಚೇರಿಗೆ ಮುತ್ತಿಗೆ ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ

01:47 PM Feb 04, 2024 | Vishnudas Patil |

ವಿಜಯಪುರ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿರುವ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ ಕ್ಷಮೆ ಯಾಚನೆಗೆ ಆಗ್ರಹಿಸಿ ಭಾನುವಾರ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ನಗರದ ಕೋರ್ಟ್ ವೃತ್ತದಲ್ಲಿರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಬಾಗಲಕೋಟ ರಸ್ತೆಯಲ್ಲಿರುವ ಬಿಜೆಪಿ ಕಚೇರಿಯಿಂದ ಯುವ ಮೋರ್ಚಾ ಕಾರ್ಯಕರ್ತರು ರಾಷ್ಟ್ರಪತಿ ಗಳನ್ನು ಅವಮಾನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ದೇಶ ವಿಭಜನೆಯ ವಿದ್ರೋಹದ ಹೇಳಿಕೆ ನೀಡಿರುವ ಸಂಸದ ಡಿ.ಕೆ.ಸುರೇಶ ದೇಶದ ಜನತೆಯ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ಮೆರವಣಿಗೆ ನಡೆಸಿದರು‌.

ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಕಾಂಗ್ರೆಸ್ ಕಚೇರಿಗೆ ಸಂಪರ್ಕ ಕಲ್ಪಿಸುವ ರಾಮನಗರ ರಸ್ತೆಗೆ ಬ್ಯಾರಿಕೇಡ್ ಅಳವಡಿಸಿ, ಸಂಚಾರ ನಿರ್ಬಂಧಿಸಿದ್ದರು. ಈ ವೇಳೆ ಬ್ಯಾರಿಕೇಡ್ ಅಳವಡಿಸಿದ ಸ್ಥಳಕ್ಕೆ ಆಗಮಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ಪ್ರತಿಭಟನಾ ಮೆರವಣಿಗೆ ತಡೆಯಲು ಪೊಲೀಸರು ಮುಂದಾದರು‌. ಪ್ರತಿಭಟನ ನಿರತರು ಬ್ಯಾರಿಕೇಡ್ ಕಿತ್ತುಹಾಕಿ ಕಾಂಗ್ರೆಸ್ ಕಚೇರಿಯತ್ತ ಮುನ್ನುಗ್ಗಲು ಯತ್ನಿಸಿದರೂ, ಪೊಲೀಸರು ಅವಕಾಶ ಕಲ್ಪಿಸಲಿಲ್ಲ.ಕುಪಿತರಾದ ಪ್ರತಿಭಟನಾ ನಿರತರು ಕೋರ್ಟ್ ವೃತ್ತದಲ್ಲಿ ಧರಣಿ ನಡೆಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ಡಿ.ಕೆ.ಸುರೇಶ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿಭಟನಾ ನಿರತ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದು, ಪೊಲೀಸ್ ವ್ಯಾನ್ ನಲ್ಲಿ ಕರೆದೊಯ್ಯುವಾಗ ಕಾಂಗ್ರೆಸ್ ಭಗಾವೋ ದೇಶ ಬಚಾವೋ, ಹರಹರ ಮಹಾದೇವ್ , ಜೈಶ್ರೀರಾಮ್ , ಭಾರತ್ ಮಾತಾಕಿ ಜೈ ಎಂಬೆಲ್ಲ ಘೋಷಣೆ ಕೂಗಿದರು.

Advertisement

Udayavani is now on Telegram. Click here to join our channel and stay updated with the latest news.

Next