Advertisement

Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ

08:44 PM Jan 04, 2025 | Team Udayavani |

ಕಾಪು: ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರ ಶಿಫಾರಸ್ಸಿನ ಮೇರೆಗೆ ರಾಜ್ಯ ಸರಕಾರವು ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ವಿಕ್ರಂ ಕಾಪು ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ.

Advertisement

ಕಾಪು ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷರಾಗಿರುವ ವಿಕ್ರಂ ಕಾಪು ಅವರು ಕಾಪು ಬಿಲ್ಲವರ ಸಹಾಯಕ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕಾಪು ಯೋಜನಾ ಪ್ರಾಧಿಕಾರಕ್ಕೆ ಸದಸ್ಯರಾಗಿ ಮಹಮ್ಮದ್ ಸಾದಿಕ್ ಮಲ್ಲಾರು, ಕೆ. ಲಕ್ಷ್ಮೀಶ ತಂತ್ರಿ ಕಲ್ಯ, ಹರೀಶ್ ಕೆ. ನಾಯಕ್ ಕಾಪು ಅವರನ್ನು ನೇಮಕ ಮಾಡಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆಯ ಅಽನ ಕಾರ್ಯದರ್ಶಿಯವರ ಪ್ರಕಟಣೆಯು ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next