Advertisement

Vikram Rathour; ನ್ಯೂಜಿಲ್ಯಾಂಡ್‌ ತಂಡ ಸೇರಿದ ಟೀಂ ಇಂಡಿಯಾ ಮಾಜಿ ಕೋಚ್

04:03 PM Sep 06, 2024 | Team Udayavani |

ಮುಂಬೈ: ಟೀಂ ಇಂಡಿಯಾದ ಮಾಜಿ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ (Vikram Rathore) ಅವರು ನೋಯ್ಡಾದಲ್ಲಿ ಅಫ್ಘಾನಿಸ್ತಾನ ವಿರುದ್ಧ ನಡೆಯಲಿರುವ ಏಕೈಕ ಟೆಸ್ಟ್‌ ಪಂದ್ಯಕ್ಕಾಗಿ ನ್ಯೂಜಿಲ್ಯಾಂಡ್ (New Zealand) ಸಹಾಯಕ ಸಿಬ್ಬಂದಿಯ ಭಾಗವಾಗಲಿದ್ದಾರೆ.

Advertisement

ಅಫ್ಘಾನಿಸ್ತಾನ ಟೆಸ್ಟ್ ಹಾಗೂ ಶ್ರೀಲಂಕಾ ವಿರುದ್ಧದ ನಂತರದ ಎರಡು ಟೆಸ್ಟ್ ಸರಣಿಗೆ ರಂಗನಾ ಹೆರಾತ್ ಅವರ ಸ್ಪಿನ್ ಬೌಲಿಂಗ್ ಕೋಚ್ ಆಗಿರುತ್ತಾರೆ ಎಂದು ನ್ಯೂಜಿಲ್ಯಾಂಡ್ ಕ್ರಿಕೆಟ್‌ ಮಂಡಳಿ ಘೋಷಿಸಿದೆ.

ವಿಕ್ರಮ್‌ ರಾಥೋರ್‌ ಅವರು ರಾಹುಲ್‌ ದ್ರಾವಿಡ್‌ ಅವರಡಿಯಲ್ಲಿ ಟೀಂ ಇಂಡಿಯಾದ ಬ್ಯಾಟಿಂಗ್‌ ಕೋಚ್‌ ಆಗಿದ್ದರು. ಕಳೆದ ಟಿ20 ವಿಶ್ವಕಪ್‌ ಬಳಿಕ ಅವರ ಅಧಿಕಾರವಧಿ ಅಂತ್ಯವಾಗಿತ್ತು.

1990ರ ಸಮಯದಲ್ಲಿ ಟೀಂ ಇಂಡಿಯಾ ಪರವಾಗಿ ಆರು ಟೆಸ್ಟ್‌ ಪಂದ್ಯಗಳನ್ನು ಆಡಿದ್ದ ವಿಕ್ರಮ್‌ ರಾಥೋರ್‌ ಬಳಿಕ ಆಯ್ಕೆ ಸಮಿತಿ ಸದಸ್ಯರಾಗಿದ್ದರು.

Advertisement

ಅತ್ಯಂತ ಯಶಸ್ವಿ ಎಡಗೈ ಸ್ಪಿನ್ನರ್ ರಂಗನಾ ಹೆರಾತ್ ಅವರು ಪಾಕಿಸ್ತಾನ ಕ್ರಿಕೆಟ್ ನಲ್ಲಿ ತಾತ್ಕಾಲಿಕ ಸ್ಪಿನ್ ಕೋಚ್ ಜವಾಬ್ದಾರಿ ನಿರ್ವಹಿಸಿದ್ದರು.

“ನಮ್ಮ ಟೆಸ್ಟ್ ಗುಂಪಿಗೆ ರಂಗನಾ ಮತ್ತು ವಿಕ್ರಮ್ ಅವರನ್ನು ಪರಿಚಯಿಸಲು ನಾವು ನಿಜವಾಗಿಯೂ ಉತ್ಸುಕರಾಗಿದ್ದೇವೆ” ಎಂದು ನ್ಯೂಜಿಲೆಂಡ್ ಮುಖ್ಯ ಕೋಚ್ ಗ್ಯಾರಿ ಸ್ಟೆಡ್ ಹೇಳಿದ್ದಾರೆ. “ಕ್ರಿಕೆಟ್ ಜಗತ್ತಿನಲ್ಲಿ ಈ ಇಬ್ಬರನ್ನು ಹೆಚ್ಚು ಗೌರವಿಸುತ್ತಾರೆ. ನಮ್ಮ ಆಟಗಾರರು ಅವರಿಂದ ಕಲಿಯುವ ಅವಕಾಶಕ್ಕಾಗಿ ನಿಜವಾಗಿಯೂ ಎದುರು ನೋಡುತ್ತಿದ್ದಾರೆಂದು ನನಗೆ ತಿಳಿದಿದೆ” ಎಂದರು.

Advertisement

Udayavani is now on Telegram. Click here to join our channel and stay updated with the latest news.

Next