Advertisement

ಕೊನೆಗೂ ‘ವಿಕ್ರಾಂತ್ ರೋಣ’ ಬಿಡುಗಡೆಗೆ ಮುಹೂರ್ತ ಫಿಕ್ಸ್

08:45 AM Jan 31, 2022 | Team Udayavani |

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರ ‘ವಿಕ್ರಾಂತ್ ರೋಣ’ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಕೋವಿಡ್ ನಿಯಾಮವಳಿಗಳ ಕಾರಣದಿಂದ ಮುಂದೂಡಿಕೆಯಾಗಿದ್ದ ವಿಕ್ರಾಂತ್ ರೋಣ ಚಿತ್ರ, ಇದೀಗ ಹೊಸ ದಿನಾಂಕದಲ್ಲಿ ಬಿಡುಗಡೆ ಕಾಣಲಿದೆ.

Advertisement

ನಿರ್ದೇಶಕ ಅನೂಪ್ ಭಂಡಾರಿ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ವಿಕ್ರಾಂತ್ ರೋಣ ಚಿತ್ರವು ಸೆಪ್ಟೆಂಬರ್ 2ರಂದು ಬಿಡುಗಡೆಯಾಗಲಿದೆ ಎಂದಿದ್ದಾರೆ. ಈ ಮೊದಲು ಫೆ.24ರಂದು ಚಿತ್ರ ಬಿಡುಗಡೆ ಮಾಡಲು ಯೋಜನೆ ರೂಪಿಸಲಾಗಿತ್ತು. ಆದರೆ ಬದಲಾದ ಸನ್ನಿವೇಶದಲ್ಲಿ ಕೋವಿಡ್ ನಿಯಾವಳಿಗಳ ಕಾರಣದಿಂದ ಚಿತ್ರ ಬಿಡುಗಡೆ ಮುಂದೂಡಲಾಗಿದೆ.

ಇದನ್ನು ಘೋಷಣೆ ಮಾಡಲು ಸಂತೋಷವಾಗುತ್ತಿದೆ. ವಿಕ್ರಾಂತ್ ರೋಣ ಚಿತ್ರವು ಸೆ.2ರಂದು ವಿಶ್ವದಾದ್ಯಂತ 3ಡಿಯಲ್ಲಿ ಬಿಡುಗಡೆಯಾಗಲಿದೆ. ಟೀಸರ್ ಮತ್ತು ಹಾಡುಗಳು ಶೀಘ್ರದಲ್ಲಿ ನಿಮ್ಮ ಮುಂದೆ ಬರಲಿದೆ ಎಂದು ಅನೂಪ್ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ:ದೈತ್ಯಾಕಾರದ ಆನೆ ಜೊತೆ ಆಟವಾಡುವ ಮೂರು ವರ್ಷದ ಪುಟಾಣಿ ಬಾಲಕಿ!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ವಿಕ್ರಾಂತ್ ರೋಣ ಅವತಾರವನ್ನು ತೆರೆಯ ಮೇಲೆ ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ. ಜ್ಯಾಕ್ ಮಂಜು ಮತ್ತು ಅಲಂಕಾರ್ ಪಾಂಡ್ಯನ್ ನಿರ್ಮಾಣದ ‘ವಿಕ್ರಾಂತ್ ರೋಣ’ಚಿತ್ರದಲ್ಲಿ ಕಿಚ್ಚ ಸುದೀಪ್ ಜೊತೆಗೆ ನಿರೂಪ್ ಭಂಡಾರಿ, ನೀತಾ ಅಶೋಕ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಕೂಡಾ ಚಿತ್ರದಲ್ಲಿ ಪಾತ್ರವಾಗಿ ಕಾಣಿಸಿಕೊಂಡಿದ್ದಾರೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next