Advertisement

Protest: ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ: ಕಂದಾಯ ಸೇವೆ ವ್ಯತ್ಯಯ

01:50 AM Sep 27, 2024 | Team Udayavani |

ಉಡುಪಿ/ಮಂಗಳೂರು: ಸೇವಾ ಭಡ್ತಿ, ಮೂಲ ಸೌಕರ್ಯ ಒದಗಿಸುವುದು ಸಹಿತ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗುರುವಾರ ಉಡುಪಿ ಮತ್ತು ದ. ಕ. ಜಿಲ್ಲೆಗಳ ಗ್ರಾಮ ಆಡಳಿತಾಧಿಕಾರಿಗಳು ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿ, ತಮ್ಮ ಬೇಡಿಕೆಗಳನ್ನು ಸರಕಾರಕ್ಕೆ ಸಲ್ಲಿಸಿದರು.

Advertisement

ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರದಿಂದ ಗ್ರಾಮ ಪಂಚಾಯತ್‌ಗಳು ಹಾಗೂ ತಾಲೂಕು ಕಚೇರಿಯಲ್ಲಿ ಕಂದಾಯಕ್ಕೆ ಸಂಬಂಧಿಸಿದ ಸಾರ್ವಜನಿಕ ಸೇವೆಗೆ ಸ್ವಲ್ಪ ಸಮಸ್ಯೆಯಾಗಿದೆ.ರಾಜ್ಯಾದ್ಯಂತ ನಡೆಯುತ್ತಿರುವ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರಕ್ಕೆ ಜಿಲ್ಲೆಯ ಗ್ರಾಮ ಆಡಳಿತಾಧಿಕಾರಿಗಳು ಬೆಂಬಲ ಸೂಚಿಸಿದ್ದಾರೆ.

ಸೆ.27ರಂದು ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುವ ಮೂಲಕ ತಮ್ಮ ಬೇಡಿಕೆಗಳನ್ನು ಜಿಲ್ಲಾಧಿಕಾರಿಗಳ ಮೂಲಕ ಮತ್ತೊಮ್ಮೆ ರಾಜ್ಯ ಸರಕಾರಕ್ಕೆ ಸಲ್ಲಿಸಲಿದ್ದಾರೆ.

ಸೇವೆಗೆ ಗೈರು
ಗುರುವಾರ ಪಿಡಿಒ, ಗ್ರಾಪಂ ಕಾರ್ಯದರ್ಶಿ, ಎಸ್‌ಡಿಎ, ಬಿಲ್‌ ಕಲೆಕ್ಟರ್‌, ಸ್ವತ್ಛತಾ ಸಿಬಂದಿ, ವಾಟರ್‌ವೆುನ್ಸ್‌ ಸಹಿತ ಪಂಚಾಯತ್‌ರಾಜ್‌ನ 11 ವೃಂದ ನೌಕರರು ಮುಷ್ಕರದಲ್ಲಿ ಭಾಗವಹಿಸಿದ್ದಾರೆ. ಕೆಲಸದ ಒತ್ತಡ, ಅಗತ್ಯ ಸೌಕರ್ಯ ಒದಗಿಸುವುದು, ಭಡ್ತಿ ಸಮಸ್ಯೆ, ಉದ್ಯೋಗ ಭದ್ರತೆ, ಆರೋಗ್ಯ ಯೋಜನೆ ಕಲ್ಪಿಸುವುದು ಮೊದಲಾದ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಬಹುತೇಕರು ಗುರುವಾರ ಸೇವೆಗೆ ಗೈರು ಹಾಜರಾಗಿದ್ದಾರೆ. ಹೀಗಾಗಿ ಸಾರ್ವಜನಿಕರಿಗೆ ಸಿಗಬೇಕಿದ್ದ ಸೇವೆಯಲ್ಲಿ ಸ್ವಲ್ಪ ಮಟ್ಟಿನ ವ್ಯತ್ಯಾಸಗಳಾಗಿವೆ.

Advertisement

Udayavani is now on Telegram. Click here to join our channel and stay updated with the latest news.

Next