Advertisement
ಹೇಗೆಂದರೆ, ಕಲ್ಪಿಸಿಕೊಂಡರೂ ಕಣ್ಣೆದುರಿಗೆ ತೆರೆದಿಡುವ ಅಮೂಲ್ಯ ಬದುಕು, ಅದೆಷ್ಟು ಬೇಗ ದಿಕ್ಕು-ದೆಸೆಯಿಲ್ಲದೆ ಕಣ್ಣು-ಕಟ್ಟಿದ ಸ್ಪರ್ಧೆಗಿಳಿದ ಕುದುರೆಯಂತೆ ಅಲೆಯುವಂತಾಗಿದೆ! ಅರೆಕ್ಷಣ, ಮೈಮನ ಕಸಿವಿಸಿಗೊಳ್ಳುತ್ತೆ! ಜೀವ ಮರುಗುತ್ತೆ. ಮತ್ತೆ ಮತ್ತೆ ಆ ಬಾಲ್ಯ, ಹಳ್ಳಿ ಬದುಕನ್ನು ಅರಸಲು ಬಯಸುತ್ತೆ!
Related Articles
Advertisement
ಕಾರಣ ಇಷ್ಟೆ: ತಂತ್ರಜ್ಞಾನದ ಆವಿಷ್ಕಾರ ಮತ್ತು ಎಲ್ಲ ಕ್ಷೇತ್ರಗಳಲ್ಲೂ ಹೊಕ್ಕಿರುವ ಅದರ ಗಾಢವಾದ ಛಾಯೆ. ಇಡೀ “ಪ್ರಪಂಚವೇ ಒಂದು ಹಳ್ಳಿ’ (Global Village) ಯಾಗಿ ಮಾರ್ಪಟ್ಟಿರುವ ಭಾವನೆ. ವಿಶೇಷವಾಗಿ, ದೂರವಾಣಿ, ಇಂಟರ್‌ನೆಟ್, ಯುಟ್ಯೂಬ್, ನೇರ ಮೆದುಳಿಗೆ ಕೈ ಹಾಕಿರುವ ಸಾಮಾಜಿಕ ಜಾಲತಾಣಗಳ ಡ್ರಗ್ಸ್ ರೀತಿಯ ಮಾನಸಿಕ ಮೋಹ ಬೆಂಬಿಡದೆ ಇಂದಿನ ಆಧುನಿಕ ಜನತೆಯ ಚಿಂತನಾರ್ಹ ಯೋಚನಾ ಶಕ್ತಿ, ಆರೋಗ್ಯ, ಕೌಟುಂಬಿಕ ಮೌಲ್ಯಗಳು, ಮಾನವೀಯ ಗುಣಗಳು ಹಾಗೂ ಒಟ್ಟಾರೆ ಜೀವನ ಶೈಲಿಯನ್ನೇ ಅಕ್ಷರಶಃ ನುಂಗಿಹಾಕಿವೆ!
ಅಲ್ಲದೆ, ಇದು ಇಂದಿನ ಅನಿವಾರ್ಯವೆಂಬಂತೆ ಕಠೊರ ಸನ್ನಿವೇಶ ಹುಟ್ಟುಹಾಕಿವೆ. ಒಂದೆಡೆ, “ಅತಿಯಾದ ಅಮೃತವೂ ವಿಷ’ವೆನ್ನುವಂತೆ, ಹಾಗೂ ಊಟದಲ್ಲಿ “ರುಚಿಗೆ ತಕ್ಕಷ್ಟು ಉಪ್ಪಿ’ರುವಂತೆ ಹಲವು ಒಳಿತು-ಕೆಡುಕಗಳ ನಡುವೆ ಎಲ್ಲವೂ ಹಿತಮಿತವಾಗಿ ಬಳಕೆಯಲ್ಲಿದ್ದರೆ ಚೆನ್ನ.ಅಲ್ವೇ? ಮೈ ಮನ ಆರೋಗ್ಯಕರವಾಗಿರುತ್ತೆ; ಜೀವನ ಉತ್ಸಾಹದಿಂದ ಕೂಡಿರುತ್ತೆ.
ಇತ್ತೀಚೆಗೆ ಜಗತ್ತಿನೆಲ್ಲೆಡೆ ಭಾರೀ ಸಂಚಲನ ಸೃಷ್ಟಿಸಿರುವ “ಕೃತಕ ಬುದ್ಧಿಮತ್ತೆ’ (Artificial Intelligence & GI) ಹಾಗೂ “ಬಯೋಚಿಪ್’ ತಂತ್ರಜ್ಞಾನಗಳು. ಈ ಎರಡೂ ತಂತ್ರಜ್ಞಾನಗಳು ಬಹುತೇಕ ಮನುಷ್ಯನನ್ನ ಸಹ ಒಂದು ಸರಕಾಗಿ ನೋಡುವ ದೂರದೃಷ್ಟಿ ಹೊಂದಿವೆ ಎಂದರೆ ತಪ್ಪಾಗಲಿಕ್ಕಿಲ್ಲ! ತೀರ
ಇತ್ತೀಚೆಗೆ, ತಂತ್ರಜ್ಞಾನ ಜಗತ್ತಿನ ಹೆಸರಾಂತ ಉದ್ಯಮಿ: ಎಲಾನ್ ಮಸ್ಕ್ ತಮ್ಮ “ನ್ಯೂರಾಲಿಂಕ್’ (Neuralink) ಸಂಸ್ಥೆಯ ಮೂಲಕ ಪ್ರಪಂಚದ ಮೊಟ್ಟ ಮೊದಲ ಪ್ರಯತ್ನವಾಗಿ ಆರೋಗ್ಯವಂತ ವ್ಯಕ್ತಿಯೊಬ್ಬರ ಮೆದುಳಿನಲ್ಲಿ ಪ್ರಾಯೋಗಿಕ “ಮೊದಲ ಬಯೋಚಿಪ್’ ಅಳವಡಿ ಸಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ! ಇದುವರೆಗೂ, ಮೊಬೈಲ್ ನಲ್ಲಿ ಕೇವಲ “ಮೆಮೊರಿ ಕಾರ್ಡ್’ ಬಳಸಿ, ಅದರಲ್ಲಿ ಸಂಗ್ರಹಿಸಿದ ಮಾಹಿತಿಬೇಕೆಂದಾಗ ಆಲಿ
ಸುವ, ನೋಡುವ ಪರಿಪಾಠದ ಪರಿಚಯವಿದ್ದ ನಮಗೆ, ಎಐ ಹಾಗೂ Biochip ತಂತ್ರಜ್ಞಾನಗಳ ಅವತಾರಗಳು ಊಹೆಗೂ ಮೀರಿದ್ದು ಅನ್ಸುತ್ತೆ ಕೂಡ. ಆಗ,ಜಗತ್ತು ಹೇಗಿರಬೇಡ? ತಂತ್ರಜ್ಞಾನ ತೊರೆದು ಮನುಷ್ಯ ಜೀವನ ಕಲ್ಪಿಸಿಕೊಳ್ಳಲಾರದ ಪರಿಸ್ಥಿತಿ ನಿರ್ಮಾಣವಾಗಿದೆ. ಅದು, ಕೇವಲ ಮನುಷ್ಯನ ಅವಶ್ಯಕತೆಗಳಿಗೆ ಪೂರಕವಾಗಿರಬೇಕೆ ಹೊರತು, ಆತನನ್ನು ಆಳುವ ಸ್ಥಿತಿ ತಲುಪಬಾರದು!
ಮುಂದಿನ ದಿನಗಳಲ್ಲಿ, ಮನುಷ್ಯ ಎದುರಿಸಬಹುದಾದ ಭಯಾನಕ ತಂತ್ರಜ್ಞಾನ ಸಂಕೋಲೆಗಳನ್ನು ಕುರಿತು ಚರ್ಚಿಸುವ ಅಗತ್ಯ ಇಂದಿನ ತುರ್ತು ಅನಿವಾರ್ಯ. ಆದರೆ, ಎಲ್ಲವೂ ಸಲೀಸಾಗಿ ಕೈಗೆಟುಕುವ ಇಂದಿನ ದಿನಗಳಲಿ, ಅತಿಯಾಗಿ ಮಿತಿಮೀರಿರುವ ಅನುಕೂಲಗಳು ಅಮೂಲ್ಯ ಖುಷಿಯ ಕ್ಷಣಗಳನ್ನು ಎಂದಿಗೂ ನೀಡಲಾರವು. ಬದಲಿಗೆ, ಪ್ರತಿಷ್ಠೆಯ ಹೆಮ್ಮರಗಳಾಗಿ, ಜನತೆ ನಾಲ್ಕು ದಿನದ ಈ ಬಾಳಲಿ ಏನೋ ಬಹುದೊಡ್ಡ ಸಾಧನೆಗೈದವರಂತೆ, ಯಂತ್ರ
ಮಾನವರಂತೆ ಬೀಗುವವರೆ!!?
ಮೂಲಭೂತವಾಗಿ, ಮಾನವ ಸಹಿತ ಸಕಲ ಜೀವ-ಸಂಕುಲವೂ ವಾಸಯೋಗ್ಯ ಸ್ವತ್ಛಂದ ಭೂಮಿ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಭೂಮಿಯಲ್ಲಿ, ಮಣ್ಣಿನ ಫಲವತ್ತತೆ ಹಾಗೂ ನೀರು ಸಂರಕ್ಷಿಸದೆ, ಗಿಡ-ಮರ ಬೆಳೆಸದೆ, ಹಸುರು ಹೆಚ್ಚಿಸದೆ, ಮತ್ತು ಪರಿಸರ ಸಮತೋಲನ ಕಾಪಾಡದೆ, ಕೇವಲ ತಂತ್ರಜ್ಞಾನ ತಲೆಯಲಿ ಹೊತ್ತು, ಮನುಷ್ಯ ಉತ್ತಮ ಆಹಾರ, ಆರೋಗ್ಯ ಮತ್ತು ಜೀವನ ಕಟ್ಟಿಕೊಳ್ಳಲು ಸಾಧ್ಯವಿಲ್ಲ.
ಸಮರೋಪಾದಿಯಲ್ಲಿ, ಜನತೆ ಸ್ವ ಇಚ್ಛೆಯಿಂದ ಹಳ್ಳಿ-ಹಳ್ಳಿಗಳಿಂದ, ನಗರಗಳು, ಬೆಟ್ಟ-ಗುಡ್ಡಗಳಲ್ಲೆಡೆ ಬೃಹತ್ ಸಂಖ್ಯೆಯಲ್ಲಿ ಸಸಿಗಳನ್ನ ನೆಟ್ಟು, ಪಾಲನೆ- ಪೋಷಣೆ ಗೈಯ್ಯುವ ಚಳವಳಿ ರೂಪದ ಆಂದೋಲನ ದೇಶಾದ್ಯಂತ ಅತ್ಯಂತ ತ್ವರಿತವಾಗಿ ಕೈಗೂಡಬೇಕು. ಈ ನಿಟ್ಟಿನಲ್ಲಿ, ಎಲ್ಲರೂ ಕೈಜೋಡಿಸಬೇಕು.
-ಡಾ| ಚಂದ್ರಪ್ಪ ಎಚ್.
ಸಹಾಯಕ ಪ್ರಾಧ್ಯಾಪಕರು,
ಸರಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ