Advertisement
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಶಿರೀನ್‌ತಾಜ್ ಸಾರ್ವಜನಿಕರಿಂದ ಅರ್ಜಿ ಪಡೆದರು. ಗ್ರಾಮಕ್ಕೆ ಮೂಲ ಸೌಕರ್ಯಜೊತೆಗೆ ಸ್ಥಳೀಯ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಂದ ವಿವರ ಪಡೆದರು.
Related Articles
Advertisement
ಸ್ಮಶಾನ ಜಾಗವನ್ನು ಅಳತೆ ಮಾಡಿ ಪಂಚಾಯತ್ ರಾಜ್ ಇಲಾಖೆಗೆ ವಹಿಸಿಕೊಡಲಾಗಿದೆ. ಇಂದಿನ ಗ್ರಾಮ ವಾಸ್ತವ್ಯ ಕಾರ್ಯ ಕ್ರಮ ಯಶಸ್ವಿಯಾಗಿ ನಡೆದಿದೆಂದರು. ಪಾಳ್ಯ ಗ್ರಾಪಂ ಅಧ್ಯಕ್ಷ ಎಸ್.ಎನ್. ಪ್ರಕಾಶ್ ಮಾತನಾಡಿ, ಜಿಲ್ಲಾಧಿಕಾರಿಗಳನಡೆ ಹಳ್ಳಿಯ ಕಡೆ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದ್ದು, ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆ ಹೆಚ್ಚು ಅರ್ಜಿಗಳು ಬಂದಿದ್ದು, ಕೆಲವು ಅರ್ಜಿಗಳು ಸ್ಥಳದಲ್ಲಿಯೇ ಇತ್ಯರ್ಥವಾಗಿವೆ. ಇನ್ನೂ ಕೆಲವು ಅರ್ಜಿಗಳು ಬಾಕಿ ಉಳಿದಿದ್ದು, ಅವುಗಳನ್ನು ಶೀಘ್ರ ಇತ್ಯರ್ಥಪಡಿಸಬೇಕು, ಅರ್ಧ ಎಕರೆ ಜಾಗವನ್ನು ಸ್ಮಶಾನಕ್ಕೆ ಕಂದಾಯ ಇಲಾಖೆ ಗ್ರಾಪಂಗೆ ವಹಿಸಿಕೊಟ್ಟಿದೆ ಎಂದರು.
ತಾಪಂ ಸದಸ್ಯ ಸಿ.ವಿ.ಲಿಂಗರಾಜು ಮಾತನಾಡಿ, ಜಿಲ್ಲಾಧಿಕಾರಿಗಳ ನಡೆ ಗ್ರಾಮಗಳ ಕಡೆಗೆ ಎನ್ನುವ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ. ಈ ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ಇರುವುದರಿಂದ ಸ್ಥಳದಲ್ಲಿಯೇ ಕೆಲವು ಸಮಸ್ಯೆಗಳು ಬಗೆಹರಿಯುತ್ತವೆ. ಅದ್ದ ರಿಂದ ಎಲ್ಲಾ ಹಳ್ಳಿಗಳಲ್ಲಿಯೂ ಇಂತಹ ಕಾರ್ಯಕ್ರಮಗಳು ಆಗಬೇಕಾಗಿದೆ. ಸರ್ಕಾರ ಪ್ರತಿ ತಿಂಗಳು ಇಂತಹಕಾರ್ಯಕ್ರಮ ಹಮ್ಮಿಕೊಂಡು ಜನಸಾಮಾನ್ಯರ ಸಮಸ್ಯೆ ಇತ್ಯರ್ಥಪಡಿಸ ಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.