Advertisement

Sullia; ಗ್ರಾಮ ವಾಸ್ತವ್ಯ ಕಾರ್ಯಕ್ರಮ ರಾಜ್ಯಕ್ಕೆ ಮಾದರಿ: ಖಾದರ್‌

11:30 PM Feb 11, 2024 | Team Udayavani |

ಸುಳ್ಯ: ತಮ್ಮ ಒತ್ತಡದ ಕೆಲಸದ ಮಧ್ಯೆಯೂ ಗ್ರಾಮ ವಾಸ್ಯವ್ಯ ಮಾಡಿ ಆ ಊರಿನ ಸಮಸ್ಯೆಗಳನ್ನು ಅರಿತು ಪರಿಹಾರಕ್ಕಾಗಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಪತ್ರಕರ್ತರು ಮಾಡಿದ ಗ್ರಾಮ ವಾಸ್ತವ್ಯ ರಾಜ್ಯಕ್ಕೆ ಮಾದರಿಯಾಗಿದೆ ಎಂದು ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಹೇಳಿದರು.

Advertisement

ಸಂಘದ ನೇತೃತ್ವದಲ್ಲಿ ದ.ಕ. ಜಿಲ್ಲಾಡಳಿತ, ದ.ಕ.ಜಿ. ಪಂ., ದ.ಕ.ಪೊಲೀಸ್‌ ಇಲಾಖೆಯ ಆಶ್ರಯದಲ್ಲಿ ಕೊಲ್ಲಮೊಗ್ರುವಿನಲ್ಲಿ ನಡೆದ ಕಾರ್ಯಕ್ರಮದ ಸಮಾರೋಪದಲ್ಲಿ ಅವರು ಮಾತನಾಡಿದರು. ಜನರು ಮಂಡಿಸಿದ ಅಹವಾಲುಗಳನ್ನು ತಾಲೂಕು, ಜಿಲ್ಲೆ ಹಾಗೂ ರಾಜ್ಯ ಮಟ್ಟದ ಅಧಿಕಾರಿಗಳು ಪರಿಹರಿಸುತ್ತಾರೆ. ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಇದರ ಪರಿಹಾರಕ್ಕೆ ಪೂರ್ಣ ಸಹಕಾರ ನೀಡುತ್ತೇನೆ. ಅಗತ್ಯ ಇದ್ದಲ್ಲಿ ಕೇಂದ್ರಕ್ಕೂ ಪತ್ರ ಬರೆಯುತ್ತೇನೆ ಎಂದವರು ಭರವಸೆ ನೀಡಿದರು.

ವಿಧಾನ ಪರಿಷತ್‌ ಸದಸ್ಯ ಪ್ರತಾಪ ಸಿಂಹ ನಾಯಕ್‌ ಮಾತನಾಡಿದರು. ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಟಿಎಪಿಸಿಎಂಎಸ್‌ ಅಧ್ಯಕ್ಚ ನಿತ್ಯಾನಂದ ಮುಂಡೋಡಿ, ತಾ. ಪಂ. ಮಾಜಿ ಉಪಾಧ್ಯಕ್ಷ ಪಿ.ಸಿ.ಜಯರಾಮ, ಕೊಲ್ಲಮೊಗ್ರ ಗ್ರಾ.ಪಂ. ಅಧ್ಯಕ್ಷೆ ಜಯಶ್ರೀ ಚಾಂತಾಳ, ಉಪಾಧ್ಯಕ್ಷ ಅಶ್ವತ್‌ ಯಾಲದಾಳ, ಹರಿಹರ ಗ್ರಾ.ಪಂ. ಅಧ್ಯಕ್ಷ ವಿಜಯ ಅಂಙಣ, ಉಪಾಧ್ಯಕ್ಷ ಜಯಂತ ಬಾಳುಗೋಡು, ರೋನ್ಸ್‌ ಬಂಟ್ವಾಳ, ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್‌ ಬಿ.ಎನ್‌. ಉಪಸ್ಥಿತರಿದ್ದರು. ಲೋಕೇಶ್‌ ಬಿ.ಎನ್‌. ವಂದಿಸಿದರು. ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ ಕಾರ್ಯಕ್ರಮ ನಿರೂಪಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next