Advertisement
ಮದ್ಯದಂಗಡಿ ಬೇಡ ಎಂದು ಗ್ರಾಪಂ ಪಿಡಿಓ, ಜನಪ್ರತಿನಿಧಿಗಳು ಹಾಗೂ ಅಬಕಾರಿ ಇಲಾಖೆಗೆ ಧಿಕ್ಕಾರ ಎಂಬ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ಹೊರ ಹಾಕಿ ಪ್ರತಿಭಟಿಸಿದರು.
Related Articles
Advertisement
ಕರ್ನಾಟಕ ಅಬಕಾರಿ ಅಧಿನಿಯಮ, 1967 ರ ರೂಲ್ 5 ರ ಪ್ರಕಾರ ಶಾಲೆ, ಧಾರ್ಮಿಕ ಸ್ಥಳ, ಆಸ್ಪತ್ರೆ, ಎಸ್‌ಸಿ, ಎಸ್‌ಟಿ ಸಮುದಾಯದ ಜನವಸತಿಯಿಂದ 100 ಮಿ. ಅಂತರದಲ್ಲಿ ಮದ್ಯದಂಗಡಿಯನ್ನು ತೆರೆಯುವಂತಿಲ್ಲ. ಕರ್ನಾಟಕ ವೈನ್ ಮರ್ಚೆಂಟ್ಸ್ vs ಕರ್ನಾಟಕ ರಾಜ್ಯ ಪ್ರಕರಣದಲ್ಲಿ ಹೈಕೋರ್ಟ್ ಜನವಸತಿ, ಶಿಕ್ಷಣ ಸಂಸ್ಥೆಗಳು, ಆರೋಗ್ಯ ಸಂಸ್ಥೆ, ಧಾರ್ಮಿಕ ಸ್ಥಳದ ಸಮೀಪ ಮದ್ಯದಂಗಡಿಯನ್ನು ತೆರೆಯಬಾರದು ಎಂದು ಆದೇಶ ನೀಡಿದೆ.
ಜನ ವಿರೋಧವಿದ್ದಾಗ 100 ಮೀ. ಎಂಬ ಸರ್ಕಾರಿ ಮಾನದಂಡಕ್ಕೆ ಕಟ್ಟು ಬಿದ್ದು ಮದ್ಯದಂಗಡಿ ತೆರೆಯುವುದು ಸೂಕ್ತವಲ್ಲ ಎಂದು ಕರ್ನಾಟಕ ಹೈಕೋರ್ಟ್ 1997 ರಲ್ಲಿ ಅಭಿಪ್ರಾಯ ಪಟ್ಟಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಶಿಶು ವಿಹಾರ, ಆರೋಗ್ಯ ಕೇಂದ್ರ, ಧಾರ್ಮಿಕ ಸ್ಥಳ ಹಾಗೂ ರುದ್ರಭೂಮಿಗಳು ಇವೆ. ಇಲ್ಲಿ ಮದ್ಯದಂಗಡಿ ತೆರೆಯುವುದರಿಂದ ಕುಡುಕರ ಹಾವಳಿ ಹೆಚ್ಚಾಗುತ್ತದೆ ಎಂದು ದೂರಿದರು.
ಭಾರತ್ ಪರಿವರ್ತನಾ ಸಂಘದ ಅಧ್ಯಕ್ಷ ಆಯಿತನಹಳ್ಳಿ ಮಂಜು ಮಾತನಾಡಿ, ಈ ಹಿಂದೆಯೇ ಗ್ರಾಮಸ್ಥರು ಮದ್ಯದಂಗಡಿ ತೆರೆಯದಂತೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ನಡುವೆ ಕೆಲವರು ಸ್ವಾರ್ಥ ಸಾಧನೆಗಾಗಿ ಸಾವಿರಾರು ಎಕರೆ ಕೃಷಿ ಭೂಮಿ ನಡುವೆ ಬಾರ್ ಮತ್ತು ಲಾಡ್ಜ್ ತೆರೆಯಲು ಅನುಮತಿ ನೀಡಿದ್ದಾರೆ. ಆದ್ದರಿಂದ ಬಾರ್ ತೆರೆಯಲು ನೀಡಿರುವ ಅನುಮತಿಯನ್ನು ರದ್ದುಪಡಿಸಬೇಕು ತಪ್ಪಿದ್ದಲ್ಲಿ ಮಹಿಳಾ ಸಂಘಟನೆಗಳ ಜೊತೆಗಡಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಬಿಲ್ಲಹಳ್ಳಿ ಶಿವಕುಮಾರ್, ಸೌಮ್ಯ ಮಹದೇವ್, ಪಿರಿಯಾಪಟ್ಟಣ ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹೆಚ್.ಸಿ.ವೀರಭದ್ರ, ಗ್ರಾಮದ ಮುಖಂಡರಾದ ಜಯಶಂಕರ್, ಹೆಚ್.ವಿ.ಜಗಪಾಲ್, ಹೆಚ್.ಜೆ.ಪ್ರವೀಣ್, ಶ್ರೀಧರ್, ಶಶಿಕುಮಾರ್, ಶಂಕರ್ ನಾಯ್ಕ, ಲೋಕೇಶ್ ನಾಯ್ಕ, ನಟರಾಜ್, ರವಿಕುಮಾರ್, ಮೈಲಾರಿ, ಉಮೇಶ್, ಮಾದೇಗೌಡ, ರಾಜೇಶ್, ಹೆಚ್.ಟಿ.ಕುಮಾರ್ ಸ್ಥಳೀಯ ಹೋರಾಟಗಾರ ಮಂಜುನಾಥ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.