ತಿಪಟೂರು: ತಾಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮದಲ್ಲಿ ಸರ್ಕಾರದ ವತಿಯಿಂದ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ಸಮರ್ಪಕ ನಿರ್ವಹಣೆ ಇಲ್ಲದೆ ಕೆಟ್ಟು ನಿಂತಿದ್ದು, ಸಂಬಂಧಪಟ್ಟ ಜಿಲ್ಲಾ ಪಂಚಾಯಿತಿ ಕುಡಿಯುವ ನೀರಿನ ಇಲಾಖಾ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನ ವಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕುಪ್ಪಾಳು ಗ್ರಾಮ ಪಂಚಾಯಿತಿ ಕೇಂದ್ರವಾಗಿದ್ದರೂ ಹಲವು ಸಮಸ್ಯೆ ಗಳಿಂದ ಕೂಡಿದೆ. 10 ಲಕ್ಷ ರೂ. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಮತ್ತು 2.5 ಲಕ್ಷ ರೂ. ವೆಚ್ಚದಲ್ಲಿ ಹೈಮಾಸ್ಟ್ ಲೈಟ್ ಅಳವಡಿಸಿ ಇನ್ನೂ ಒಂದು ವರ್ಷ ಕಳೆದಿಲ್ಲ.
ಸರಿಯಾದ ನಿರ್ವಹಣೆ ಇಲ್ಲದೆ ಕೆಟ್ಟು ಹೋಗಿವೆ. ಈ ನೀರಿನ ಘಟಕ ಸುತ್ತಮುತ್ತಲಿನ ಗ್ರಾಮಸ್ಥರು ಸೇರಿದಂತೆ ಕುಪ್ಪಾಳು ಗ್ರಾಮದ ಜನರಿಗೆ ಕುಡಿಯುವ ನೀರಿನ ಆಸರೆಯಾಗಿತ್ತು. ಆದರೆ, ಈಗ ಶುದ್ಧ ನೀರಿಲ್ಲದೆ ಪರದಾಡುವಂತಾಗಿದೆ ಎಂದು ದೂರಿದರು.
ಕುಡಿಯುವ ನೀರಿಗಾಗಿ ಪರದಾಟ: ಗ್ರಾಮ ಪಂಚಾಯಿತಿಗೆ ದೂರು ನೀಡಿ ದರೆ ಇದು ನಮಗೆ ಸಂಬಂಧ ಪಡುವುದಿಲ್ಲ ಎಂದು ಹೇಳುತ್ತಾರೆ. ಅಧಿಕಾರಿಗಳು ಘಟಕವನ್ನು ಉದ್ಘಾಟನೆ ಮಾಡಿ ಹಣ ಬಿಡುಗಡೆ ಮಾಡಿದರೆ ತಮ್ಮ ಕೆಲಸ ಮುಗಿಯಿತು ಎಂಬಂತಾಗಿದೆ. ನಿರ್ವಹಣೆಯ ಕೊರತೆಯಿಂದ ಇಂತಹ ಎಷ್ಟೋ ಘಟಕ ತಾಲೂಕಿನಲ್ಲಿ ಕೆಟ್ಟು ನಿಂತಿವೆ. ಸರ್ಕಾರ ಹಣ ನೀಡಿದರೂ ಸಂಬಂಧಪಟ್ಟ ಅಧಿಕಾರಿಗಳ ಬೇಜವಾ ಬ್ದಾರಿತನದಿಂದ ಗ್ರಾಮೀಣರು ಶುದ್ಧ ಕುಡಿಯುವ ನೀರಿಗಾಗಿ ಪರಿತಪಿಸು ವಂತಾಗಿದೆ ಎಂದು ದೂರಿದರು.
ಹೈಮಾಸ್ಟ್ ದೀಪ ಸರಿಪಡಿಸಿ: ಜನರ ತೆರಿಗೆ ಹಣದಲ್ಲಿ ಇಂತಹ ಯೋಜನೆ ಸರ್ಕಾರ ತರುತ್ತದೆ. ಆದರೆ, ಅದೇ ಜನರಿಗೆ ತೊಂದರೆಯಾದರೆ ಸರ್ಕಾರ ಏಕೆ ಕ್ರಮಕೈಗೊಳ್ಳುವುದಿಲ್ಲ. ಸಾರ್ವಜ ನಿಕರಿಗೆ ಉಪಯೋಗಕ್ಕೆ ಬಾರದೆ ಹೋದರೆ ಇಂತಹ ಯೋಜನೆ ತಂದು ಉಪಯೋಗವಿಲ್ಲ. ಈ ಬಗ್ಗೆ ನಾವು ಯಾರನ್ನು ಕೇಳಬೇಕೆಂಬುದು ತಿಳಯದಂತ್ತಾಗಿದ್ದು, ಕೂಡಲೇ ನಮ್ಮ ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಮತ್ತು ಹೈಮಾಸ್ಟ್ ದೀಪವನ್ನು ಸರಿಪಡಿಸಬೇಕು ಒತ್ತಾಯಿಸಿದ್ದಾರೆ.