Advertisement

ಕಲ್ಲು ಗಣಿಗಾರಿಕೆ ಬಂದ್‌ಗೆ ಗ್ರಾಮಸ್ಥರ ಆಗ್ರಹ

02:04 PM Jul 05, 2019 | Team Udayavani |

ಬೆಳಗಾವಿ: ಬೈಲಹೊಂಗಲ ತಾಲೂಕಿನ ಮರಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಅನಧಿಕೃತ ಕಲ್ಲು ಗಣಿಗಾರಿಕೆ ಕಂಪನಿಗಳನ್ನು ಬಂದ್‌ ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರು ಗುರುವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

Advertisement

ಈ ಗ್ರಾಪಂ ವ್ಯಾಪ್ತಿಯ ಮರಕಟ್ಟಿ, ಗಣಿಕೊಪ್ಪ, ತಿಗಡಿ, ಶೀಗಿಹಳ್ಳಿ, ಪುಲಾರಕೊಪ್ಪ ಗ್ರಾಮಗಳಲ್ಲಿ ಕಲ್ಲು ಗಣಿಗಾರಿಕೆ ಅವ್ಯಾಹತವಾಗಿ ನಡೆದಿದೆ. ಜಿಲ್ಲಾ ಕಲ್ಲು ಗಣಿಗಾರಿಕೆಯ ನಿಯಮಗಳನ್ನು ಪಾಲಿಸದೇ ಕಲ್ಲು ಗಣಿಗಾರಿಕೆ ನಡೆಸಿ ರಾತ್ರಿ ವೇಳೆಯಲ್ಲಿ ಬ್ಲಾಸ್ಟಿಂಗ್‌ ಮಾಡುತ್ತಿವೆ ಎಂದು ಆರೋಪಿಸಿದರು.

ಮರಕಟ್ಟಿ ಗ್ರಾಪಂ ಅಧ್ಯಕ್ಷ ರುದ್ರಗೌಡ ಪಾಟೀಲ ಮಾತನಾಡಿ, ಸುಮಾರು 6-7 ಕಿ.ಮೀ. ಅಂತರದಲ್ಲಿ 11.12 ಕಂಪನಿಗಳು ಗಣಿಗಾರಿಕೆಯಲ್ಲಿ ತೊಡಗಿಕೊಂಡಿವೆ. ಇದರಿಂದ ಸುತ್ತಲಿನ ಪರಿಸರ ಹಾಳಾಗುತ್ತಿದ್ದು, ಜನ-ಜಾನುವಾರುಗಳಿಗೆ ತೊಂದರೆ ಆಗುತ್ತಿದೆ. ಅಂತರ್ಜಲ ಮಟ್ಟ ಕುಸಿಯುತ್ತಿದೆ. ಈ ಬಗ್ಗೆ ಸಂಬಂಧಿಸಿದ ಇಲಾಖೆಗೆ ಅನೇಕ ಸಲ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಇಲಾಖೆಯವರು ಅಕ್ರಮ ಗಣಿಗಾರಿಕೆಗೆ ಕುಮ್ಮಕ್ಕು ನೀಡುತ್ತಿದ್ದು, ಕಂಪನಿಗಳು ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ಕೃಷಿ ಅವಲಂಬಿತ ಸಾವಿರಾರು ಕುಟುಂಬಗಳು ಹೆಚ್ಚು ನಷ್ಟ ಅನುಭವಿಸುತ್ತಿವೆ. ಗಣಿಗಾರಿಕೆಯಿಂದ ಬರುತ್ತಿರುವ ಧೂಳಿನಿಂದ ನೈಸರ್ಗಿಕ ಕ್ರಿಯೆ ಸಂಪೂರ್ಣ ಹದಗೆಟ್ಟು ಹೋಗಿದ್ದು, ಕುಡಿಯಲು ಯೋಗ್ಯವಾದ ನೀರು ಕಲುಷಿತಗೊಳ್ಳುತ್ತಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಕ್ರಮ ಗಣಿಗಾರಿಕೆಗಳನ್ನು ಬಂದ್‌ ಮಾಡಬೇಕು ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next