ದಾವಣಗೆರೆ: ಸೇತುವೆಗಾಗಿ ಆಗ್ರಹಿಸಿ ಹಳೇ ಕುಂದುವಾಡ ಗ್ರಾಮಸ್ಥರಿಂದ ಗುರುವಾರ (ಜ.09) ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಸೇತುವೆ ಮಾಡುವಂತೆ ಆಗ್ರಹಿಸಿ ರಸ್ತೆ ಬಂದ್ ಮಾಡಿ ಹಳೇ ಕುಂದುವಾಡ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಅಧಿಕಾರಿಗಳು ಗ್ರಾಮಸ್ಥರ ನಡುವೆ ವಾಗ್ವಾದ ನಡೆದಿದ್ದು, ಪ್ರತಿಭಟನಕಾರರ ಆಕ್ರೋಶ ತೀವ್ರ ಸ್ವರೂಪ ಪಡೆದಿದೆ. 50ಕ್ಕೂ ಗ್ರಾಮದ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಾವಣಗೆರೆ ನಗರದ ಹಳೇ ಕುಂದುವಾಡ ರಾಷ್ಟ್ರೀಯ ಹೆದ್ದಾರಿ ಬಳಿ ಘಟನೆ ನಡೆದಿದೆ.
ಎಸಿ, ತಹಶೀಲ್ದಾರ್ ಗ್ರಾಮಸ್ಥರ ನಡುವೆ ವಾಗ್ವಾದ ನಡೆದಿದ್ದು, ಪ್ರತಿಭಟನೆ ಹಿಂಪಡೆಯದ ಹಿನ್ನೆಲೆ ಗ್ರಾಮಸ್ಥರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಳೆದ ಎರಡು ಬ್ರಿಡ್ಜ್ ಅವೈಜ್ಞಾನಿಕವಾಗಿ ಮಾಡಲಾಗಿದೆ. ಎರಡು ಸೇತುವೆ ಒಡೆದು ಈಗ ಮತ್ತೆ ಅವೈಜ್ಞಾನಿಕ ಸೇತುವೆ ನಿರ್ಮಾಣ ಮಾಡಲಾಗ್ತಿದೆ. ಹಳೇ ಕುಂದುವಾಡ-ಬನ್ನಿಕೋಡ ಮಾರ್ಗಕ್ಕೆ ನೇರ ಸೇತುವೆ ನಿರ್ಮಾಣ ಮಾಡಲು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ.
ಸ್ಥಳಕ್ಕೆ ಎಎಸ್ಪಿ ವಿಜಯಕುಮಾರ್ ಸಂತೋಷ್, ಡಿವೈಎಸ್ಪಿ ಮಲ್ಲೇಶ್ ದೊಡ್ಮನಿ ಆಗಮಿಸಿದರು.