Advertisement

ತುರಮರಿ ಕಚಡಾ ಡಿಪೋ ವಿಸ್ತರಣೆಗೆ ಗ್ರಾಮಸ್ಥರ ವಿರೋಧ

12:17 PM Dec 28, 2019 | Team Udayavani |

ಬೆಳಗಾವಿ: ನಗರದ ತ್ಯಾಜ್ಯವನ್ನು ತಾಲೂಕಿನ ತುರಮುರಿ ಗ್ರಾಮದ ವಿಲೇವಾರಿ ಘಟಕಕ್ಕೆ ನಿತ್ಯ ಸ್ಥಳಾಂತರ ಮಾಡಲಾಗುತ್ತಿದ್ದು, ಈ ಘಟಕ ವಿಸ್ತರಣೆ ಮಾಡಲು ಹೊರಟಿರುವ ಜಿಲ್ಲಾಡಳಿತ ಕ್ರಮ ಖಂಡಿಸಿ ಶುಕ್ರವಾರ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ನೇತೃತ್ವದಲ್ಲಿ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

Advertisement

ಮಹಾನಗರ ಪಾಲಿಕೆ ಹಾಗೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಗ್ರಾಮಕ್ಕೆ ಬಂದು ಸಾರ್ವಜನಿಕರ ಆಹವಾಲು ಸ್ವೀಕರಿಸುತ್ತಿದ್ದಾಗ ವಿರೋಧ ವ್ಯಕ್ತಪಡಿಸಿದ ಗ್ರಾಮಸ್ಥರು ಶಾಸಕಿ ಹೆಬ್ಟಾಳಕರ ಅವರ ನೇತೃತ್ವದಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಿದರು. ನಗರದ ಹೊಲಸನ್ನು ಹಳ್ಳಿಗೆ ತಂದು ಬಿಸಾಕುತ್ತಿರುವುದರಿಂದ ಪರಿಸರ ಮಾಲಿನ್ಯದ ಜತೆಗೆ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮಸ್ಥರೊಂದಿಗೆ ರಸ್ತೆಗಿಳಿದ ಹೆಬ್ಟಾಳಕರ ಅವರು ರಾಜ್ಯ ಹೆದ್ದಾರಿ ಮೆಲೆ ಕುಳಿತು ಜಿಲ್ಲಾಡಳಿತ ವಿರುದ್ಧ ಕಿಡಿಕಾರಿದರು. ಈಗಾಗಲೇ ಕಚಡಾ ಡಿಪೋ ಇದೆ. ಈಗ ಅದನ್ನು ಮತ್ತಷ್ಟು ವಿಸ್ತರಣೆ ಮಾಡಲು ಹೊರಟಿರುವ ಜಿಲ್ಲಾಡಳಿತ ಕ್ರಮ ಸರಿಯಲ್ಲ. ಡಿಪೋದ ಕಸದ ಸಂಸ್ಕರಣಾ ಸಾಮರ್ಥ್ಯ ಹೆಚ್ಚಿಸಲು ನಾವು ಬಿಡುವುದಿಲ್ಲ. ಈಗಿರುವ ಡಿಪೋ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಶಾಸಕಿಯಾದಾಗಿನಿಂದ ಒತ್ತಡ ಹೇರುತ್ತಿದ್ದರೂ ಅಧಿಕಾರಿಗಳು ಕೇಳುತ್ತಿಲ್ಲ. ಏನೇ ಆದರೂ ವಿಸ್ತರಣೆಗೆ ಅವಕಾಶ ಮಾಡಿ ಕೊಡುವುದಿಲ್ಲ ಎಂದರು.

ಸದ್ಯ ಇರುವ ತ್ಯಾಜ್ಯ ವಿಲೇವಾರಿ ಘಟಕವನ್ನು 100 ಟನ್‌ದಿಂದ 450 ಟನ್‌ವರೆಗೆ ವಿಸ್ತರಿಸಲು ಜಿಲ್ಲಾಡಳಿತ ಮುಂದಾಗಿದೆ. ಅಲ್ಲದೇ ಈ ಸಂಬಂಧ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಅಧಿಕಾರಿಗಳು ಬಂದಿದ್ದಾರೆ. ಕೂಡಲೇ ಈ ಯೋಜನೆಯನ್ನು ವಾಪಸ್‌ ಪಡೆದುಕೊಳ್ಳಬೇಕು. ಬೇರೆ ಕಡೆಗೆ ಇದನ್ನು ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಜಿಪಂ ಸದಸ್ಯೆ ಸರಸ್ವತಿ ಪಾಟೀಲ ಸೇರಿದಂತೆ ತಾಪಂ, ಗ್ರಾಪಂ ಸದಸ್ಯರು ಹಾಗೂ ತುರಮುರಿ ಗ್ರಾಮಸ್ಥರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next