Advertisement
ಆಲೂರು ತಾಲ್ಲೂಕಿನ ಕೆ.ಹೊಸಕೋಟೆ ಹೋಬಳಿ ಅಡಿಬೈಲು ಗ್ರಾಮದಲ್ಲಿ ಮೂರು ದಿನಗಳ ಹಿಂದೆ ಶ್ರೀ ರಂಗನಾಥಸ್ವಾಮಿ ದೇವರ ಉತ್ಸವ ಮಾಡುವ ವಿಚಾರವಾಗಿ ಸಭೆ ಕರೆಯಲಾಗಿತ್ತು. ಗ್ರಾಮದಲ್ಲಿರುವ ಕೆಲವು ಜೆಡಿಎಸ್ ಬೆಂಬಲಿತ ಕಾರ್ಯಕರ್ತರೆಂದು ಗುರುತಿಸಿಕೊಂಡಿರುವ ರಘು,ಮಂಜುನಾಥ್,ದರ್ಶನ್,ಹಾಗೂ ಚಂದನ್ ಸೇರಿ ಹಳೆಯ ಗ್ರಾಮ ಪಂಚಾಯಿತಿ ಚುನಾವಣೆ ವೈಷಮ್ಯವಿಟ್ಟು ಕೃಷ್ಣಚಾರಿ ಹಾಗೂ ದಿನೇಶ್ ನಿಗೆ ಎಲ್ಲಾ ವಿಷಯದಲ್ಲೂ ಪರವಾಗಿ ನಿಲ್ಲುತ್ತೀಯಾ ಎಂದು ಅದೇ ಗ್ರಾಮದ ಪುಟ್ಟರಾಜು ಹಾಗೂ ಆತನ ಪತ್ನಿ ಗೀತಾಳ ಮೇಲೆ ಹಲ್ಲೆ ಮಾಡಿದ್ದಾರೆ.
Related Articles
Advertisement
ಗ್ರಾಮದಲ್ಲಿ ಪ್ರತಿವರ್ಷದಂತೆ ಈ ವರ್ಷವು ಶ್ರೀ ರಂಗನಾಥಸ್ವಾಮಿ ಉತ್ಸವ ನಡೆಸುವ ಉದ್ದೇಶದಿಂದ ಸಭೆ ಕರೆಯಲಾಗಿತ್ತು ಅದರೆ ಉದ್ದೇಶ ಪೂರ್ವಕವಾಗಿ ಜೆಡಿಎಸ್ ಶಾಸಕ ಹೆಚ್.ಕೆ.ಕುಮಾರಸ್ವಾಮಿ ಬೆಂಬಲಿಗರು ಈ ಭಾಗದಲ್ಲಿ ಜೆಡಿಎಸ್ ಹಿಡಿತ ಕೈತಪ್ಪುತ್ತಿದೆ ಎನ್ನುವ ಮನೋಭಾವನೆಯಿಂದ ನಮ್ಮ ಮೇಲೆ ಹಲ್ಲೆ ಮಾಡಿಸಲಾಗುತ್ತಿದೆ ಇದುವರೆವಿಗೂ ನಾವುಗಳು ಅಣ್ಣ ತಮ್ಮಂದಿರಂತೆ ಬಾಳುತ್ತಿದ್ದೇವು ಜೆಡಿಎಸ್ ನ ಕೆಲವು ಮುಖಂಡರ ಕೀಳು ಮಟ್ಟದ ರಾಜಕೀಯದಿಂದ ನಮ್ಮ ನೆಮ್ಮದಿಯನ್ನು ಕಿತ್ತುಕೊಂಡಿದ್ದಾರೆ ಹಲ್ಲೆ ಮಾಡಿರುವ ವೀಡಿಯೊ ಸಹಿತ ದೂರು ನೀಡಿ ಮೂರು ದಿನಗಳಾದರೂ ಕ್ರಮ ಕೈಗೊಳ್ಳಬೇಕಾದ ಪೊಲೀಸ್ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದು ಇಷ್ಟೊಂದು ಅವಾಂತರಕ್ಕೆ ಕಾರಣವಾಗಿದೆ ಎಂದು ಗ್ರಾಮಸ್ಥರು ಹರಿಹಾಯ್ದರಲ್ಲದೇ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳದಿದ್ದರೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಸಿದರು.
ಇತ್ತೀಚಿನ ದಿನಗಳಲ್ಲಿ ಆಲೂರು ತಾಲ್ಲೂಕಿನಲ್ಲಿ ಇಂತಹ ಘಟನೆಗಳು ನಡೆಯುತ್ತಿದ್ದು ಆಲೂರು ಪೊಲೀಸ್ ಅಧಿಕಾರಿಗಳ ವೈಫಲ್ಯ ಎದ್ದು ಕಾಣುತ್ತಿದೆ ಉದಾಹರಣೆಗೆ ಪತ್ರಕರ್ತರ ಮೇಲೆ ಹಲ್ಲೆ,ಕೂಲಿ ಕಾರ್ಮಿಕರ ಮೇಲಿನ ಹಲ್ಲೆ,ರಸ್ತೆಯಲ್ಲಿ ಓಡಾಡುವ ಅಮಾಯಕರ ಮೇಲೆ ಹಲ್ಲೆ,ರಸ್ತೆ ಬದಿಯಲ್ಲಿ ಕ್ಯಾಂಟೀನ್ ಇಟ್ಟು ಜೀವನ ನಡೆಸುವ ಮಹಿಳೆಯರ ಲೈಂಗಿಕ ಕಿರುಕುಳ,ಸೇರಿದಂತೆ ದಿನನಿತ್ಯ ಇಂತಹ ಹತ್ತಾರು ಪ್ರಕರಣಗಳು ನಡೆಯುತ್ತವೆ ಅದರೂ ಪೊಲೀಸ್ ಅಧಿಕಾರಿಗಳು ಅವರ ಮೇಲೆ ಗಟ್ಟಿಯಾದ ಕ್ರಮ ಕೈಗೊಳ್ಳುತ್ತಿಲ್ಲ ಇಂತಹ ಅಧಿಕಾರಿಗಳಿಂದ ಜನಸಾಮಾನ್ಯರಿಗೆ ನ್ಯಾಯ ಒದಗಿಸಲು ಸಾದ್ಯವೇ ಎನ್ನುವುದು ಜನಸಾಮಾನ್ಯರ ಪ್ರಶ್ನೆಯಾಗಿದೆ.
ಪ್ರತಿಭಟನೆಯಲ್ಲಿ ಮಣಿ,ಕುಶಲ,ಪ್ರೇಮ,ಜಾನಕಿ,ಚಂದನ್,ಅಪ್ಪಣ್ಣ,ದೇವರಾಜೇಗೌಡ,ಮೋಹನ್ ಹಾಗೂ ಇತರರು ಉಪಸ್ಥಿತರಿದ್ದರು.