ಚಿಕ್ಕಬಳ್ಳಾಪುರ: ಜಿಲ್ಲೆಯ ಹೊಸಹುಡ್ಯ ಗ್ರಾಪಂನಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು,ಪಿಡಿಒ ಪ್ರತಿ ಕೆಲಸಕ್ಕೂ ಹಣ ಕೇಳಿ ಜನಸಾಮಾನ್ಯರನ್ನು ಸುಲಿಗೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಕಚೇರಿಗೆ ಬೀಗ ಹಾಕಿ ಪ್ರತಿಭಟಿಸಿದರು.
ಗ್ರಾಪಂನಲ್ಲಿ ಇ ಖಾತೆ ಮಾಡಲು ಬಡವರು ಸಲ್ಲಿಸಿದ ಅರ್ಜಿಗಳಿಗೆ ಬೆಲೆ ಇಲ್ಲದಂತಾಗಿದೆ. ಬಡಾವಣೆ ಮಾಲಿಕರು ಸಲ್ಲಿಸುವ ಅರ್ಜಿಗಳಿಗೆತ್ವರಿತವಾಗಿ ಸ್ಪಂದಿಸುವ ಅಧಿಕಾರಿಗಳು, ಬಡವರು,ಕೂಲಿಕಾರ್ಮಿಕರು ಇಖಾತೆ ಮಾಡಿಸಿಕೊಳ್ಳಲುಬಂದರೆ 20 ಸಾವಿರ ರೂ.ಗೆ ಲಂಚಕ್ಕೆ ಪೀಡಿಸುತ್ತಿದ್ದಾರೆ. ಇಲಾಖೆಯ ಹಿರಿಯ ಅಧಿಕಾರಿಗಳುತನಿಖೆ ನಡೆಸಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮಜರುಗಿಸಬೇಕೆಂದು ಪ್ರತಿಭಟನಾಕಾರರರು ಒತ್ತಾಯಿಸಿದರು.
ಹಿರಿಯ ಅಧಿಕಾರಿಗಳು ಭಾಗಿ ಆರೋಪ: ಪಿಡಿಒ ಮಂಜುನಾಥ್ ಗ್ರಾಪಂ ಅನ್ನು ಭ್ರಷ್ಟಾಚಾರದ ಕೇಂದ್ರವನ್ನಾಗಿಸಿದ್ದಾರೆ. ಇಲ್ಲಿ ಪ್ರತಿ ಕೆಲಸಕ್ಕೂ ಲಂಚ ನೀಡುವ ಪರಿಸ್ಥಿತಿ ನಿರ್ಮಾ ಣವಾಗಿದೆ. ಇ ಖಾತೆ ಮಾಡಿಕೊಡಲು ಹಿರಿಯ ಅಧಿಕಾರಿಗಳಿಗೆ ಹಣ ನೀಡಬೇಕೆಂದು ನೇರವಾಗಿಹೇಳುತ್ತಾರೆ. ಈ ಲಂಚಾವತಾರದಲ್ಲಿ ಯಾವ ಹಿರಿಯ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಸಿ ಬಡವರ ಇ ಖಾತೆಮಾಡಲು ಕ್ರಮ ಕೈಗೊಳ್ಳಬೇಕೆಂದು ಗ್ರಾಪಂಸದಸ್ಯ ಮಂಜುನಾಥ್ ಒತ್ತಾಯಿಸಿದ್ದಾರೆ. ಪಿಡಿಒ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದ ಗ್ರಾಮಸ್ಥರು, ಕೂಡಲೇ ಈ ಅಧಿಕಾರಿಯ ಮೇಲೆ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.
ವಿಷಯ ತಿಳಿದ ಕೂಡಲೇ ಜಿಪಂ ಯೋಜನಾ ನಿರ್ದೇಶಕ ಗಿರಿಜಾ ಶಂಕರ್, ತಾಪಂ ಇಒಹರ್ಷವರ್ಧನ್ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಸಮಾಲೋಚನೆ ನಡೆಸಿ ಈ ಸಂಬಂಧತನಿಖೆ ನಡೆಸುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ವಾಪಸ್ ಪಡೆದುಕೊಂಡರು. ವೆಂಕಟಕೃಷ್ಣಪ್ಪ, ಗಿಡ್ನಹಳ್ಳಿ ಗಂಗಾಧರ್, ಹೊಸಹುಡ್ಯ ನಾರಾಯಣಸ್ವಾಮಿ, ವೆಂಕಟರಾಜು, ನರಸಿಂಹಪ್ಪ, ಗಂಗರಾಜಮ್ಮ, ಜಯಮ್ಮ, ಪ್ರಭಾವತಿ ಮತ್ತಿತರರು ಉಪಸ್ಥಿತರಿದ್ದರು
ಗ್ರಾಪಂ ವ್ಯಾಪ್ತಿಯಲ್ಲಿ ಸಮುದಾಯ ಶೌಚಾಲಯ ನಿರ್ಮಿಸುವ ವಿಚಾರದಲ್ಲಿ ಬಿಲ್ ಮಾಡಿಕೊಟ್ಟರೂ ಹೆಚ್ಚುವರಿಯಾಗಿ ಮಾಡಿಕೊಡಲು ಒತ್ತಾಯಿಸಿ ಗಲಾಟೆ ಮಾಡಿದ್ದಾರೆ. ಆ ಘಟನೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗ್ರಾಮ ಪಂಚಾಯಿತಿಯಲ್ಲಿ ಯಾವ ರೀತಿಯ ಭ್ರಷ್ಟಾಚಾರ ಮಾಡುತ್ತಿಲ್ಲ, ಆರೋಪ ನಿರಾಧಾರ.
– ಮಂಜುನಾಥ್, ಪಿಡಿಒ