Advertisement
ಗ್ರಾಮಕ್ಕೆ ಯಾವುದೇ ಬಸ್ ಸೌಲಭ್ಯ ಇಲ್ಲದಿರುವುದರಿಂದ ಸಾಕಷ್ಟು ಸಮಸ್ಯೆಯಾಗುತ್ತಿದೆ. ಚಳ್ಳಕೆರೆ-ಚಿತ್ರದುರ್ಗ ಮುಖ್ಯ ರಸ್ತೆಯಿಂದ 7-8 ಕಿಮೀ ಕಾಲ್ನಡಿಗೆಯಲ್ಲಿ ಕ್ರಮಿಸಬೇಕು. ಗ್ರಾಮದ ಶಾಲೆಗೆ ಮೂವರು ಶಿಕ್ಷಕಿಯರನ್ನು ನೇಮಕ ಮಾಡಲಾಗಿದ್ದು, ಸಾರಿಗೆ ವ್ಯವಸ್ಥೆ ಇಲ್ಲದಿರುವುದರಿಂದ ಒಂಟಿಯಾಗಿ ಶಾಲೆಗೆ ಬರಲು ಕಷ್ಟವಾಗುತ್ತಿದೆ. ಆದ್ದರಿಂದ ಪುರುಷ ಶಿಕ್ಷಕರನ್ನು ನೇಮಕ ಮಾಡುವಂತೆ ಒತ್ತಾಯಿಸಿದರು.
ವ್ಯಕ್ತಪಡಿಸಿದರು. ಚಳ್ಳಕೆರೆ, ಚಿತ್ರದುರ್ಗ, ಹಿರಿಯೂರು ತಾಲೂಕುಗಳಿಗೆ ಪಲ್ಲವಗೆರೆ ಗಡಿ ಗ್ರಾಮವಾಗಿದ್ದು ಮೂಲ ಸೌಲಭ್ಯದಿಂದ
ವಂಚಿತವಾಗಿದೆ. ಗ್ರಾಮಕ್ಕೆ ಕೂಡಲೇ ಸಾರಿಗೆ ಸಂಸ್ಥೆಯ ಬಸ್ ಓಡಿಸಬೇಕು. ನರ್ಮ್ ಯೋಜನೆ ಅಡಿ ನಗರ ವ್ಯಾಪ್ತಿಯಿಂದ 20 ಕಿಮೀ ದೂರಕ್ಕೆ ಸಾರಿಗೆ ಬಸ್‌ಗಳು ಸಂಚರಿಸುವ ಅವಕಾಶವಿದ್ದರೂ ಸಾರಿಗೆ ಇಲಾಖೆ ಅ ಧಿಕಾರಿಗಳು ಆ ಬಗ್ಗೆ ಗಮನ ನೀಡುತ್ತಿಲ್ಲ ಎಂದು ಆರೋಪಿಸಿದರು. ರೈತಸಂಘ ಹಾಗೂ ಹಸಿರು ಸೇನೆಯ ಗ್ರಾಮ ಶಾಖೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಗ್ರಾಮ ಶಾಖೆಯ ಅಧ್ಯಕ್ಷ ಆರ್. ತಿಪ್ಪೇಸ್ವಾಮಿ, ಕಾರ್ಯದರ್ಶಿ
ಬ್ರಹ್ಮಾನಂದ, ಲಕ್ಷ್ಮೀಕಾಂತ, ಕುಮಾರ್, ಕರಿಯಪ್ಪ, ತಿಪ್ಪೇಸ್ವಾಮಿ, ರಂಗಸ್ವಾಮಿ, ಭದ್ರಪ್ಪ, ರಂಗನಾಥ್, ಹನುಮಂತಪ್ಪ, ತಾಲೂಕು ಅಧ್ಯಕ್ಷ ಬಸ್ತಿಹಳ್ಳಿ ಸುರೇಶ್ ಬಾಬು ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.