Advertisement

ಅತ್ಯಾಚಾರ ಎಸಗಿದ ಆರೋಪಿಗಳ ಜೊತೆ ಸಂತ್ರಸ್ತೆಯ ಮೆರವಣಿಗೆ..!

02:39 PM Mar 29, 2021 | Team Udayavani |

ಭೋಪಾಲ್ : ದಿನದಿಂದ ದಿನಕ್ಕೆ ಮನುಷ್ಯ ಎಷ್ಟು ಕ್ರೂರಿಯಾಗುತ್ತಿದ್ದಾನೆ ಎಂಬುದಕ್ಕೆ ಮಧ್ಯಪ್ರದೇಶದಲ್ಲಿ  ನಡೆದ ಈ ಮನ ಕಲಕುವ ಘಟನೆಯೇ ಸಾಕ್ಷಿ. ಅತ್ಯಾಚಾರಕ್ಕೆ ಒಳಗಾದ ಅಪ್ರಾಪ್ತೆಯನ್ನು ಆರೋಪಿಗಳ ಜೊತೆ ಕಟ್ಟಿ ಮೆರವಣಿಗೆ ಮಾಡಿರುವ ಹೀನ ಕೃತ್ಯ ಬೆಳಕಿಗೆ ಬಂದಿದೆ.

Advertisement

ಮಧ್ಯಪ್ರದೇಶದ ಭೋಪಾಲ್ ನಿಂದ ಸುಮಾರು 400 ಕಿ.ಮೀ ದೂರದಲ್ಲಿರುವ ಅಲಿರಾಜಪುರ ಎಂಬಲ್ಲಿ ಘಟನೆ ನಡೆದಿದೆ. ಬುಡಕಟ್ಟು ಜನರೇ ಹೆಚ್ಚಿರುವ ಈ ಗ್ರಾಮದಲ್ಲಿ 16 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆದಿದೆ.

ಮತ್ತೊಂದು ಹೃದಯ ಮರುಗುವ ವಿಚಾರ ಏನೆಂದರೆ, ಅತ್ಯಾಚಾರಕ್ಕೆ ಒಳಗಾಗಿರುವ ಬಾಲಕಿ ಕುಟುಂಬ ಸದಸ್ಯರೂ ಕೂರ ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ. ತಮ್ಮ ಮಗಳಿಂದ ಮರ್ಯಾದೆ ಹಾಳಾಗಿದೆ ಎಂಬ ಕಾರಣಕ್ಕೆ ಈ ಕೃತ್ಯ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಮೆರವಣಿಗೆ ವೇಳೆ ಭಾರತ್ ಮಾತಾಕಿ ಜೈ ಎಂದು ಕೂಗಲಾಗಿದೆ.

ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಅಪ್ರಾಪ್ತೆಯನ್ನು ರಕ್ಷಣೆ ಮಾಡಿದ್ದಾರೆ. ಅಲ್ಲದೆ ಆ ಬಾಲಕಿ ಕುಟುಂಬಸ್ಥರು ಸೇರಿದಂತೆ ಕೆಲವರ ಮೇಲೆ ದೂರು ದಾಖಲಾಗಿದೆ. ಅಲ್ಲದೆ ಅತ್ಯಾಚಾರದಲ್ಲಿ ಭಾಗಿಯಾಗಿದ್ದ ಇಬ್ಬರು ಯುವಕರ ಮೇಲೂ ದೂರು ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next