Advertisement

ದೆಹಲಿಯ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ವಿನಯ್ ಕುಮಾರ್ ಸಕ್ಸೇನಾ ನೇಮಕ

08:41 AM May 24, 2022 | Team Udayavani |

ಹೊಸದಿಲ್ಲಿ: ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ವಿನಯ್ ಕುಮಾರ್ ಸಕ್ಸೇನಾ ಅವರನ್ನು ಎನ್‌ಸಿಟಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

Advertisement

ಕಳೆದ ವಾರ, ಹಲವಾರು ವಿಷಯಗಳಲ್ಲಿ ದೆಹಲಿ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದರು. ಮೇ 23ರ ಸೋಮವಾರದಂದು ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ.

ವಿನಯ್ ಸಕ್ಸೇನಾ ಅವರನ್ನು ಹುದ್ದೆಗೆ ನೇಮಿಸಿದ ನಂತರ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಟ್ವೀಟ್ ಮಾಡಿದ್ದಾರೆ. “ನಾನು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರೊಂದಿಗೆ ಹಲವಾರು ವಿಷಯಗಳಲ್ಲಿ ಕೆಲಸ ಮಾಡಿದ್ದೇನೆ ಮತ್ತು ದೆಹಲಿಯಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿದ್ದೇನೆ. ಅವರು ಬಹಳ ಒಳ್ಳೆಯ ವ್ಯಕ್ತಿ. ನಾನು ಅವರಿಗೆ ಭವಿಷ್ಯಕ್ಕಾಗಿ ಶುಭ ಹಾರೈಸುತ್ತೇನೆ ಮತ್ತು ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ಬಯಸುತ್ತೇನೆ.” ಎಂದಿದ್ದಾರೆ.

ಇದನ್ನೂ ಓದಿ:ಕುಳಿಯೊಳಗೆ ನಿಗೂಢ ಅರಣ್ಯ ಪತ್ತೆ! ಇಲ್ಲಿವೆ 130 ಮೀ. ಎತ್ತರದ ಮರಗಳು, ಚೀನಾದಲ್ಲೊಂದು ವಿಸ್ಮಯ

ಅವರು ಹೊಸದಾಗಿ ನೇಮಕಗೊಂಡ ದೆಹಲಿ ಎಲ್‌ಜಿಗೆ ಸ್ವಾಗತ ಕೋರಿದ್ದಾರೆ. “ದೆಹಲಿಯ ಜನರ ಪರವಾಗಿ ನಾನು ಹೊಸದಾಗಿ ನೇಮಕಗೊಂಡ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರಿಗೆ ಆತ್ಮೀಯ ಸ್ವಾಗತವನ್ನು ಕೋರುತ್ತೇನೆ. ದೆಹಲಿಯ ಒಳಿತಿಗಾಗಿ ದೆಹಲಿ ಸರ್ಕಾರದ ಸಂಪುಟದಿಂದ ಸಂಪೂರ್ಣ ಸಹಕಾರ ಪಡೆಯಲಿದ್ದಾರೆ” ಎಂದು ಅರವಿಂದ್ ಕೇಜ್ರಿವಾಲ್ ಸೋಮವಾರ ಹೇಳಿದ್ದಾರೆ.

Advertisement

ಮಾರ್ಚ್ 23, 1958 ರಂದು ಜನಿಸಿದ ವಿನಯ್ ಕುಮಾರ್ ಸಕ್ಸೇನಾ ಅವರು ಕಾನ್ಪುರ ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿ. ಇತ್ತೀಚಿನವರೆಗೂ ಅವರು ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ (ಕೆವಿಐಸಿ) ಅಧ್ಯಕ್ಷರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next