Advertisement
ನ್ಯಾಯಾಂಗ ಬಂಧನದಲ್ಲಿ ಇರುವ ಮಾಜಿ ಸಚಿವ ವಿನಯ ಕುಲಕರ್ಣಿ ಪ್ರಕರಣದ ಬಗ್ಗೆ ಹೆಚ್ಚಿನ ವಿಚಾರಣೆಗೆ ಒಳಪಡಿಸಲು ತಮ್ಮ ವಶಕ್ಕೆ ನೀಡುವಂತೆ ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು.
Related Articles
Advertisement
ಪ್ರತಿವಾದ ಮಂಡಿಸಿದ ಆರೋಪಿ ಪರ ವಕೀಲ ಬಾಹುಬಲಿ ದನವಾಡಿ, ಇದು ನಾಲ್ಕು ವರ್ಷದ ಹಿಂದಿನ ಪ್ರಕರಣ. ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ಹೆಚ್ಚಿನ ವಿಚಾರಣೆ ಅಗತ್ಯವಿಲ್ಲ ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿದರು.
ಅಲ್ಲದೇ, ಸಿಬಿಐ ವಶದ ಬಗ್ಗೆ ತಕಾರಾರು ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ಎಂ.ಪಂಚಾಕ್ಷರಿ ಅವರು ವಿನಯ ಕುಲಕರ್ಣಿ ಅವರನ್ನು ನ.9ರವರೆಗೆ ವಿಚಾರಣೆಗೆ ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದರು.
ಗುರುವಾರ ಜಿಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಡಿ ಸಿಬಿಐ ಅಧಿಕಾರಿಗಳು ಕಲಂ 302, 143, 147, 148, 120-ಬಿ ಅಡಿ ವಿನಯ್ ಕುಲಕರ್ಣಿ ವಶಕ್ಕೆ ಪಡೆದು, ವಿಚಾರಣೆ ಬಳಕ ೩ನೇ ಹೆಚ್ಚುವರಿ ನ್ಯಾಯಾಲಯಕ್ಕೆ ಹಾಜರಪಡಿಸಿದ್ದರು. ನ್ಯಾಯಾಲಯ ಒಂದು ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದರಿಂದ, ಹಿಂಡಲಗಾ ಜೈಲಿನಲ್ಲಿದ್ದ ವಿನಯ ಅವರನ್ನು ಹೆಚ್ಚಿನ ವಿಚಾರಣೆಗೆ ಪುನಃ ನ್ಯಾಯಾಲಯ ಸಿಬಿಐಗೆ ಹಸ್ತಾಂತರಿಸಿದೆ.