Advertisement

ನ.18ಕ್ಕೆ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

04:53 PM Nov 12, 2020 | sudhir |

ಧಾರವಾಡ :ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶಗೌಡ ಹತ್ಯೆ ಪ್ರಕರಣದ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆ ಮತ್ತೆ ನ.18ಕ್ಕೆ ಮುಂದೂಡಲಾಗಿದೆ.

Advertisement

ಕಳೆದ ಮಂಗಳವಾರ ವಿನಯ್ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು, ಸಿಬಿಐ ತಕರಾರು ಸಲ್ಲಿಸಲು ಅವಕಾಶ ನೀಡಿತು.

ನಂತರ ಇದೇ ಜಾಮೀನು ಅರ್ಜಿ ವಿಚಾರಣೆಯನ್ನು ನ.18ಕ್ಕೆ ಮುಂದೂಡಿತು. ಈಗಾಗಲೇ ವಿನಯ್ ಬಂಧನಕ್ಕೆ ಒಳಗಾಗಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ:ಒಂದೂವರೆ ವರ್ಷದಿಂದ ಪೊಲೀಸರಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Advertisement

Udayavani is now on Telegram. Click here to join our channel and stay updated with the latest news.

Next