ಬೆಂಗಳೂರು: ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಸಲ್ಲಿಸಿದ್ದ ಚಾರ್ಜ್ ಶೀಟ್ ನ್ನು ಹೈಕೋರ್ಟ್ ಪರಿಗಣಿಸಿದೆ.
ಇದನ್ನೂ ಓದಿ:ಹೀಗೂ ಉಂಟೆ; ಕೋವಿಡ್ ಲಸಿಕೆಯಿಂದ ತಪ್ಪಿಸಿಕೊಳ್ಳಲು ನದಿಗೆ ಹಾರಿ ಪರಾರಿಯಾದ ಗ್ರಾಮಸ್ಥರು!
ಆರೋಪಿ ಪ್ರಭಾವಿ ವ್ಯಕ್ತಿಯಾಗಿದ್ದು, ಈ ಹಂತದಲ್ಲಿ ಜಾಮೀನು ನೀಡಿದರೆ ಸಾಕ್ಷ್ಯ ನಾಶಪಡಿಸುವ ಸಾಧ್ಯತೆಯಿದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್ ಜಾಮೀನು ಮಂಜೂರು ಮಾಡಲು ನಿರಾಕರಿಸಿದೆ.
ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ, ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಅವರನ್ನು ಕಳೆದ ವರ್ಷದ ನವೆಂಬರ್ 5ರಂದು ಅವರ ಧಾರವಾಡ ನಿವಾಸದಲ್ಲಿ ಬಂಧಿಸಲಾಗಿತ್ತು.