ಧಾರವಾಡ: ಇನ್ನು 15 ದಿನಗಳಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಹೇಳಿದ್ದಾರೆ.
ಸಮೀಪದ ಕಿತ್ತೂರಿನದ ಪ್ರವಾಸಿ ಮಂದಿರದಲ್ಲಿ ನಡೆದ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಶೀಘ್ರವೇ ನಡೆಯಲಿದ್ದು, ಈ ಕುರಿತು ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ. ಸಚಿವ ಸ್ಥಾನಕ್ಕೆ ಸಿ.ಪಿ.ಯೋಗೇಶ್ವರ ಮತ್ತು ಲಕ್ಷ್ಮಣ ಸವದಿ ಅವರ ವಿಚಾರದಲ್ಲಿ ಹೈಕಮಾಂಡ ತೀರ್ಮಾನ ಮಾಡಲಿದೆ.ಆದರೆ ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದರು ವಿನಯ್ ಹೇಳಿದರು.
ಇನ್ನು ಬೆಳಗಾವಿ ಅಽವೇಶನ ಸಂದರ್ಭದಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟ ಕುರಿತು ಪ್ರತಿಕ್ರಿಯಿಸಿದ ಅವರು, ಈ ಕುರಿತು ಚರ್ಚಿಸಲು ಸಭಾಪತಿಗಳ ಬಳಿ ಸಮಯ ಕೇಳಿದ್ದೇವೆ. ಹೋರಾಟದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಬಿಜೆಪಿ ಸರ್ಕಾರ ಇದ್ದಾಗಲು ಕೂಡ ಸ್ವಾಮೀಜಿ ಹೋರಾಟ ಮಾಡಿದ್ದಾರೆ. ಸ್ವಾಮೀಜಿ ನ್ಯಾಯ ಸಿಗುವರೆಗೂ ಹೋರಾಟ ಮಾಡುತ್ತಾರೆ. ನಮ್ಮ ಸರ್ಕಾರ ಇದ್ದರು ನಾವು ಬೇಡ ಎಂದು ಹೇಳಲು ಆಗಲ್ಲ. ಅವರು ಇಡೀ ಪಂಚಮಸಾಲಿ ಸಮುದಾಯಕ್ಕೆ 2ಎ ಕೇಳುತ್ತಿದ್ದಾರೆ. ನಮ್ಮ ಸಮಾಜಕ್ಕೆ ಮೀಸಲಾತಿ ನೀಡಿ ಎಂಬುದು ನಮ್ಮ ಒತ್ತಾಯ ಇದೆ ಎಂದರು.
ಇದೇ ವೇಳೆ ಕೆಲ ಶಾಸಕರಿಗೆ ಮಂತ್ರಿ ಮಾಡುವ ಆಸೆ ತೋರಿಸಿ ಹೋರಾಟದಿಂದ ದೂರ ಮಾಡಿದ್ದಾರೆ ಎಂಬ ಸ್ವಾಮೀಜಿ ಆರೋಪಕ್ಕೆ ಪ್ರತಿಕ್ರಿಯಿಸಿದ ಶಾಸಕ ವಿನಯ್, ನಾನು ಮಾತ್ರ ಹೋರಾಟಕ್ಕೆ ಹೋಗುವೆ. ನಾನು ಹುಟ್ಟ ಹೋರಾಟಗಾರನಿದ್ದೇನೆ. ಕೆಲವರು ಮಂತ್ರಿ ಆಸೆಯಿಂದ ಮಾತನಾಡುವ ಬಗ್ಗೆ ನನಗೆ ಗೊತ್ತಿಲ್ಲ. ಹೋರಾಟಕ್ಕೆ ಬರುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ. ಪಂಚಮಸಾಲಿ ಹೋರಾಟವನ್ನು ಸರ್ಕಾರ ಹತ್ತಿಕ್ಕುತ್ತಿದೆ ಎಂಬ ಆರೋಪದಲ್ಲಿ ಹುರುಳಿಲ್ಲ ಎಂದರು.
————————————–
ಕೆಪಿಸಿಸಿ ಅದ್ಯಕ್ಷ ಅಧ್ಯಕ್ಷ ಸ್ಥಾನಕ್ಕೆ ಇಬ್ಬರು, ಮೂವರು ಆಕಾಂಕ್ಷೆಗಳು ಇದ್ದಾರೆ. ಇದು ಮಾಧ್ಯಮದ ಚರ್ಚೆಯಷ್ಟೇ, ಡಿಕೆಶಿ ಅವರು ಸಚಿವರು ಇರೊ ಕಾರಣ ಕೆಲಸ ಮಾಡಲು ಕಷ್ಟವಾಗುತ್ತಿದೆ. ಹೀಗಾಗಿ ಅಧ್ಯಕ್ಷರ ಬದಲಾವಣೆಯಾಗುತ್ತಿದೆ. ನಾವು ಹೇಳಿದವರು ಅಧ್ಯಕ್ಷರಾಗಲ್ಲ, ಹೈಕಮಾಂಡ್ ನಿರ್ಧಾರ ಮಾಡುತ್ತದೆ.
– ವಿನಯ್ ಕುಲಕರ್ಣಿ, ಶಾಸಕರು,ಧಾರವಾಡ ಗ್ರಾಮೀಣ.
ಇದನ್ನೂ ಓದಿ: Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್