ಧಾರವಾಡ: ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಲಾಗಿದೆ.
ಅದೇ ರೀತಿ ಈ ಪ್ರಕರಣದಲ್ಲಿ ಬಂಧಿತರಾಗಿರುವ ವಿನಯ ಕುಲಕರ್ಣಿ ಸೋದರ ಮಾವ ಚಂದ್ರಶೇಖರ ಇಂಡಿ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಕೂಡ ಮತ್ತೆ 14 ದಿನ ವಿಸ್ತರಣೆ ಮಾಡಲಾಗಿದೆ.
ಇದನ್ನೂ ಓದಿ:ತೇಜಸ್ ನಲ್ಲಿ ತೇಜಸ್ವಿ: ಯುದ್ಧ ವಿಮಾನದಲ್ಲಿ 15 ಸಾವಿರ ಅಡಿ ಎತ್ತರದಲ್ಲಿ ಹಾರಾಟ ನಡೆಸಿದ ಸಂಸದ
ಜಿಲ್ಲೆಯ ಮೂರನೇ ಅಧಿಕ ಹಾಗೂ ವಿಶೇಷ ಸಿಬಿಐ ನ್ಯಾಯಾಲಯದ ನ್ಯಾಯಾಧೀಶರಾದ ಸಿ.ಎಂ. ಗಂಗಾಧರ ಅವರು ಈ ಆದೇಶ ಹೊರಡಿಸಿದರು.
ಇದನ್ನೂ ಓದಿ: ನಾವೆಲ್ಲರೂ ರೈತರು ಬೆಳೆದ ಅನ್ನ ತಿನ್ನುವವರಲ್ಲವೇ? ಪ್ರತಿಭಟನೆಗೆ ಬೆಂಬಲ ಕೋರಿದ ಸಿದ್ದರಾಮಯ್ಯ
ಈಗಾಗಲೇ ರಾಕೇಶ ರಂಜನ್ ನೇತೃತ್ವದ ಸಿಬಿಐ ಅಧಿಕಾರಿಗಳ ತಂಡ ಚಾರ್ಜಶೀಟ್ ಸಲ್ಲಿಸಿದೆ. ಅಲ್ಲದೆ, ನಾಳೆಗೆ (ಫೆ. 5) ವಿನಯ ಕುಲಕರ್ಣಿ ಬಂಧನವಾಗಿ ಮೂರು ತಿಂಗಳು ಭರ್ತಿಯಾಗಲಿವೆ.