Advertisement
ನ. 27ರಂದು ವಿನಯ ಕುಲಕರ್ಣಿ ಪರ ವಕೀಲರು ಜಾಮೀನು ಮಂಜೂರು ಮಾಡುವಂತೆ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ಕಳೆದ ಹಲವು ವಿಚಾರಣೆಯಲ್ಲಿ ಸಿಬಿಐ ಹಾಗೂ ವಿನಯ ಪರ ವಕೀರ ವಾದ ಆಲಿಸಿದ್ದ ನ್ಯಾಯಾಲಯ, ಡಿ. 14ಕ್ಕೆ ತೀರ್ಪು ಕಾಯ್ದಿರಿಸಿತ್ತು. ಅದರಂತೆ ಸೋಮವಾರ ನಡೆದ ವಿಚಾರಣೆ ವೇಳೆ ನ್ಯಾಯಾಲಯ, ಅರ್ಜಿದಾರರು ಪ್ರಕರಣದಲ್ಲಿ ಗಂಭೀರ ಸ್ವರೂಪದ ಆರೋಪ ಎದುರಿಸುತ್ತದ್ದಾರೆ. ಜೊತೆಗೆ ಸಾಕ್ಷಿ ನಾಶ ಮಾಡಿದ್ದಾರೆ ಎಂಬ ಆರೋಪವನ್ನು ಎದುರಿಸುತ್ತಿದ್ದು, ಪ್ರಭಾವಿ ವ್ಯಕ್ತಿಯಾಗಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಇನ್ನು ನಡೆಯುತ್ತಿದ್ದು, ಈ ವೇಳೆ ಜಾಮೀನು ಮಂಜೂರು ಮಾಡುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟು, ವಿನಯ ಕುಲಕರ್ಣಿಯವರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಮಾಡಿತು